ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಕಾಂಗ್ರೆಸ್ ಮುಖಂಡ ಯತೀಂದ್ರ ಸಿದ್ದರಾಮಯ್ಯರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಪೇಜ್ ರಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ.
ಅಲ್ಲದೇ ಬೆಂಗಳೂರಿಮ ಆರ್ ಆರ್ ನಗರ ವಿಧಾನಸಭೆ ಕ್ಷೇತ್ರದಲ್ಲಿಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುಸುಮಾ ವಿರುದ್ಧವೂ ಕಿಡಿಗೇಡಿಗಳು ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ.
ಯತೀಂದ್ರ ಸಿದ್ದರಾಮಯ್ಯ ಅಭಿಮಾನಿಗಳ ಬಳಗ ಎಂಬ ಎಂಬ ನಕಲಿ ಫೇಸ್‌ಬುಕ್ ಖಾತೆಯ ಡಿಪಿಯಲ್ಲಿ ಯತೀಂದ್ರ ಫೋಟೋ ಹಾಕಿರುವ ಕಿಡಿಗೇಡಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಟಿಪ್ಪು ಸುಲ್ತಾನ್ ಭಾವಚಿತ್ರವನ್ನು ಮಾರ್ಫಿಂಗ್ ಮಾಡಿ ಪೋಸ್ಟ್ ಮಾಡಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಮುಖಂಡ ಶಶಾಂಕ್ ಗೌಡ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕಿಡಿಗೇಡಿಗಳು ಅಶ್ಲೀಲ ಪದಗಳಿಂದ ನಿಂದಿಸಿ ಜತೆಗೆ ಅಸಭ್ಯವಾಗಿ ಫೋಟೋಗಳನ್ನು ಹಾಕಿ ಸಾರ್ವಜನಿಕರನ್ನು ಪ್ರಚೋದಿಸುವ ಪೋಸ್ಟ್ ಹಾಕಲಾಗಿದೆ. ಸಿಎಂ ಸಿದ್ದರಾಮಯ್ಯರ ಚಿತ್ರ ತಿರುಚಿ, ಅಶ್ಲೀಲದೊಂದಿಗೆ ಅವಾಚ್ಯ ಶಬ್ಧಗಳನ್ನು ಬಳಿಸಿ ಅನೇಕ ಪೋಸ್ಟ್‌ಗಳನ್ನು ಹಾಕಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅಪರಿಚಿತ ವ್ಯಕ್ತಿಗಳ ವಿರುದ್ಧ ಕಾನೂನುಕ್ರಮಕ್ಕೆ ಒತ್ತಾಯಿಸಿದ್ದಾರೆ. ಈಗಾಗಲೇ ಪೊಲೀಸರು ನಕಲಿ ಫೇಸ್‌ಬುಕ್ ಪೇಜ್ ಡಿಲೀಟ್ ಮಾಡಿಸಿದ್ದಾರೆ.