Homeಕರ್ನಾಟಕದಾವಣಗೆರೆ | ಜನತಾದರ್ಶನದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ | ಜನತಾದರ್ಶನದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಂಸದರ ಕಚೇರಿಯಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಜನತಾದರ್ಶನ ಕಾರ್ಯಕ್ರಮದಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಸಾರ್ವಜನಿಕರಿಂದ ಅಹವಾಲು ಹಾಗೂ ಮನವಿ ಪತ್ರಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ಆಲಿಸಿದರು.

ಜಗಳೂರು ತಾಲೂಕಿನ ಬಸವನಕೋಟೆ, ಹೊನ್ನಾಳಿ, ನ್ಯಾಮತಿ, ಹರಪನಹಳ್ಳಿ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ವಿವಿಧ ಗ್ರಾಮೀಣ ಪ್ರದೇಶಗಳು ಸೇರಿದಂತೆ ನಗರದ ಹಲವು ಭಾಗಗಳಿಂದ ಆಗಮಿಸಿದ್ದ ಮಹಿಳೆಯರು ಹಾಗೂ ಸಾರ್ವಜನಿಕರು ತಮ್ಮ ಸಮಸ್ಯೆಗಳು ಮತ್ತು ಅಭಿವೃದ್ಧಿ ಸಂಬಂಧಿತ ಬೇಡಿಕೆಗಳನ್ನು ಸಂಸದರ ಗಮನಕ್ಕೆ ತಂದರು.

ಕುಡಿಯುವ ನೀರು, ರಸ್ತೆ ಮತ್ತು ಚರಂಡಿ ವ್ಯವಸ್ಥೆ, ವಿದ್ಯುತ್ ಪೂರೈಕೆ, ಪಿಂಚಣಿ, ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳು, ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯಗಳು ಸೇರಿದಂತೆ ವಿವಿಧ ಇಲಾಖೆಗಳ ವ್ಯಾಪ್ತಿಗೆ ಒಳಪಡುವ ಸಮಸ್ಯೆಗಳ ಕುರಿತು ಸಾರ್ವಜನಿಕರು ಮನವಿ ಸಲ್ಲಿಸಿದರು. ಇದೇ ವೇಳೆ ತಮ್ಮ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಸೌಕರ್ಯ ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆಯೂ ಮನವಿ ಮಾಡಿದರು.

ಸಾರ್ವಜನಿಕರಿಂದ ಸಲ್ಲಿಕೆಯಾದ ಪ್ರತಿಯೊಂದು ಮನವಿಯನ್ನು ಪರಿಶೀಲಿಸಿದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಸಮಸ್ಯೆಗಳ ಸ್ವರೂಪ ಮತ್ತು ತುರ್ತು ಅಗತ್ಯವನ್ನು ಆಧರಿಸಿ ಆದ್ಯತೆ ಮೇರೆಗೆ ಪರಿಹಾರ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಅವುಗಳಿಗೆ ತ್ವರಿತ ಹಾಗೂ ಶಾಶ್ವತ ಪರಿಹಾರ ಒದಗಿಸುವುದು ಜನಪ್ರತಿನಿಧಿಯ ಪ್ರಮುಖ ಜವಾಬ್ದಾರಿಯಾಗಿದೆ. ಜನತಾದರ್ಶನದಂತಹ ಕಾರ್ಯಕ್ರಮಗಳು ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳ ನಡುವಿನ ನೇರ ಸಂಪರ್ಕವನ್ನು ಮತ್ತಷ್ಟು ಗಟ್ಟಿಗೊಳಿಸುತ್ತವೆ” ಎಂದು ಹೇಳಿದರು.

“ಕ್ಷೇತ್ರದ ಪ್ರತಿಯೊಬ್ಬ ನಾಗರಿಕರ ಸಮಸ್ಯೆಗೆ ಸ್ಪಂದಿಸುವುದು ನನ್ನ ಆದ್ಯತೆ. ಸಾರ್ವಜನಿಕರಿಂದ ಸಲ್ಲಿಕೆಯಾಗುವ ಯಾವುದೇ ಮನವಿಯೂ ನಿರ್ಲಕ್ಷ್ಯಕ್ಕೆ ಒಳಗಾಗದಂತೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಜನರ ಕೆಲಸಗಳಿಗೆ ಆದ್ಯತೆ ನೀಡಿ ಸಾಧ್ಯವಾದಷ್ಟು ಶೀಘ್ರ ಪರಿಹಾರ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು” ಎಂದು ತಿಳಿಸಿದರು.

ಜನತಾದರ್ಶನದಲ್ಲಿ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ಸಂಸದರ ಗಮನಕ್ಕೆ ತರುವ ಅವಕಾಶ ದೊರೆತಿದ್ದು, ವಿವಿಧ ಇಲಾಖೆಗೆ ಸಂಬಂಧಿಸಿದ ಹಲವು ಮನವಿಗಳಿಗೆ ಸ್ಥಳದಲ್ಲಿಯೇ ಅಗತ್ಯ ಮಾರ್ಗದರ್ಶನ ನೀಡಲಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments