Homeಕರ್ನಾಟಕಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದ ಡಿಸಿಎಂ ಡಿ ಕೆ ಶಿವಕುಮಾರ್

ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದ ಡಿಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರಿನ ಬಿ.ಮಾರೇನಹಳ್ಳಿಯಲ್ಲಿರುವ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೆಂಟರ್ ಉದ್ಘಾಟನೆ ಹಾಗೂ ಬೋಯಿಂಗ್ ಸುಕನ್ಯಾ ಲೋಕಾಪರ್ಣೆ ಮಾಡಿ ಸಾರ್ವಜನಿಕ ‌ಸಮಾರಂಭದಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದರು.

ಪ್ರಧಾನಮಂತ್ರಿಯವರನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು‌ ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಮಯದಲ್ಲಿ ಸಚಿವರಾದ ಕೆ.ಜೆ. ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ರಜನೀಶ್ ಗೋಯಲ್, ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್, ಬೆಂಗಳೂರು ಪೊಲೀಸ್ ಆಯುಕ್ತರಾದ ಬಿ. ದಯಾನಂದ ಸೇರಿದಂತೆ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದ ಗೌಡ, ಲೋಕಸಭಾ‌ ಸದಸ್ಯರಾದ ಪಿ.ಸಿ. ಮೋಹನ್, ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಹಾಗೂ ಶಾಸಕರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments