ಗುಬ್ಬಿ ಪಟ್ಟಣದಲ್ಲಿ ಪ್ರಜಾ ಸೇವಾ ಇಲಾಖೆ ಹಾಗೂ ತುಮಕೂರು ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಮೊದಲ ‘ಪ್ರಜಾ ಸೇವಾ ಅಭಿಯಾನ’ ಕಾರ್ಯಕ್ರಮಕ್ಕೆ ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಇಂದು ಚಾಲನೆ ನೀಡಿದರು.
ಶಿಕ್ಷಕರ ದಿನಾಚರಣೆಯ ಹಿನ್ನೆಲೆಯಲ್ಲಿ ಕಾರ್ಯಕ್ರಮದ ವೇದಿಕೆಯಲ್ಲಿ ಮಾಜಿ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಿದ ಬಳಿಕ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಅವರ ಸಮಸ್ಯೆಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ಗುಬ್ಬಿ ಶಾಸಕರು ಹಾಗೂ ಕೆಎಸ್‌ಆರ್‌ಟಿಸಿ ಅಧ್ಯಕ್ಷರಾದ ಎಸ್.ಆರ್.ಶ್ರೀನಿವಾಸ್, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಹೇಶ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪಾ ಚೋಳನ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಅಶ್ವಿಜ .ಬಿ.ವಿ, ಗ್ಯಾರಂಟಿ ಅನುಷ್ಟಾನ ಸಮಿತಿ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಗೌಡ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.


