ಹೊಸದಿಲ್ಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರೇ ಸೋಲು ಅನುಭವಿಸಿದ್ದಾರೆ. ಮತ ಎಣಿಕೆ ಆರಂಭವಾದಾಗಿನಿಂದಲೂ ಅರವಿಂದ್ ಕೇಜ್ರಿವಾಲ್ ಹಿನ್ನಡೆಯಲ್ಲೇ ಇದ್ದರು. ಬಿಜೆಪಿಯ ಪರ್ವೇಶ್ ವರ್ಮಾ ಅರವಿಂದ್ ಕೇಜ್ರಿವಾಲ್ ವಿರುದ್ಧ ಗೆಲುವು ಸಾಧಿಸಿದ್ದಾರೆ.
ದೇಶದ ಗಮನ ಸೆಳೆದಿರುವ ದಿಲ್ಲಿ ವಿಧಾನಸಭೆ ಚುನಾವಣೆ ಮತ ಎಣಿಕೆ ಮುಗಿಯುವ ಹಂತಕ್ಕೆ ಬಂದಿದ್ದು, ಸತತ ಮೂರನೇ ಬಾರಿಗೆ ಅಧಿಕಾರ ಹಿಡಿಯುವ ಮೂಲಕ ಹ್ಯಾಟ್ರಿಕ್ ಜಯದ ನಿರೀಕ್ಷೆಯಲ್ಲಿದ್ದ ಆಡಳಿತರೂಢ ಆಮ್ ಆದ್ಮ ಪಕ್ಷಕ್ಕೆ ಹಿನ್ನಡೆ ಉಂಟಾಗಿದೆ.
ಬಿಜೆಪಿ 46 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಎಎಪಿ 24 ಕ್ಷೇತ್ರಗಳಲ್ಲಿ ಮುಂದಿದೆ. ಕಳೆದ ಎರಡು ವಿಧಾನಸಭೆ ಚುನಾವಣೆಯಲ್ಲಿ ಎರಡಂಕಿ ದಾಟಲು ವಿಫಲವಾಗಿದ್ದ ಬಿಜೆಪಿ ಈ ಬಾರಿ ಸರಳ ಬಹುಮತದ ಗಡಿ ದಾಟಿ ಅಧಿಕಾರಕ್ಕೇರಲಿದ್ದರೆ, ಆಡಳಿತಾರೂಢ ಎಎಪಿ ಎರಡನೇ ಸ್ಥಾನಕ್ಕೆ ಕುಸಿಯಲಿದೆ ಎಂದು ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನಿಜವಾಗುವ ಲಕ್ಷಣಗಳು ಕಾಣುತ್ತಿವೆ.