ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಖಾಲಿದ್ ಸೈಫಿ, ಗುಲ್ಫಿಶಾ ಫಾತಿಮಾ, ಮೀರನ್ ಹೈದರ್ ಹಾಗೂ ಇತರ ನಾಲ್ವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.
ನ್ಯಾಯಮೂರ್ತಿ ನವೀನ್ ಚಾಪ್ಲಾ ಮತ್ತು ನ್ಯಾಯಮೂರ್ತಿ ಶಾಲಿಂದರ್ ಕೌರ್ ಅವರ ವಿಭಾಗೀಯ ಪೀಠವು ಯುಎಪಿಎ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಎಲ್ಲ ಮೇಲ್ಮನವಿಗಳನ್ನು ವಜಾಗೊಳಿಸಿ ಆದೇಶಿಸಿದೆ.
ಜಾಮೀನು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಅಥರ್ ಖಾನ್, ಖಾಲಿದ್ ಸೈಫಿ, ಮುಹಮ್ಮದ್ ಸಲೀಂ ಖಾನ್, ಶಿಫಾ ಉರ್ ರೆಹಮಾನ್, ಮೀರನ್ ಹೈದರ್, ಗುಲ್ಪಿಶಾ ಫಾತಿಮಾ ಮತ್ತು ಶಾದಾಬ್ ಅಹ್ಮದ್ ಅವರು ದಿಲ್ಲಿ ಹೈಕೋರ್ಟ್ ಮೊರೆ ಹೋಗಿದ್ದರು.
2020ರ ಫೆಬ್ರವರಿ 24ರಂದು ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಸಮಯದಲ್ಲಿ, ಚಾಂದ್ ಬಾಗ್‌ನ ವಜೀರಾಬಾದ್ ರಸ್ತೆಯಲ್ಲಿರುವ ಹೀರೋ ಶೋರೂಂಗೆ ಬೆಂಕಿ ಹಚ್ಚಲಾಗಿದೆ ಎಂದು ಆರೋಪಿಸಲಾಗಿತ್ತು. ಅಲ್ಲದೆ, ಅದೇ ಶೋರೂಂನಲ್ಲಿ ಸೇವೆಗಾಗಿ ಇರಿಸಲಾಗಿದ್ದ ಆಲ್ಟೋ ಕಾರನ್ನು ನಾಶಪಡಿಸಲಾಗಿದೆ ಮತ್ತು ಶೋರೂಂನ ಬೀಗಗಳನ್ನು ಒಡೆದು ಅನೇಕ ವಸ್ತುಗಳನ್ನು ಹಾನಿಗೊಳಿಸಲಾಗಿದೆ ಎಂದು ಎರಡು ಪ್ರತ್ಯೇಕ ದೂರುಗಳು ದಾಖಲಾಗಿದ್ದವು.
2021ರ ಸೆಪ್ಟೆಂಬರ್‌ನಲ್ಲಿ, ಈ ಮೂವರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಲಾಗಿತ್ತು. ಆದರೆ, ಆರೋಪಿಗಳು ತಾವು ಯಾವುದೇ ಅಪರಾಧ ಮಾಡಿಲ್ಲ ಎಂದು ವಾದಿಸಿದ್ದರು. ಈ ಆರೋಪಗಳನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ಪರವಾಗಿ 21 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.