ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ ಚಂದ್ರಕಾಂತ ಬೆಲ್ಲದ ಅವರು ತಾವಾಡಿರುವ ಮಾತುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಕ್ಷಮೆ ಕೋರಿದ್ದಾರೆ.
ಶನಿವಾರ (ಆ.24) ಬೆಂಗಳೂರಿನ ಪ್ಯಾಲೆಸ್ ಮೈದಾನದಲ್ಲಿ ಜಿಂದಾಲ್ ಕಂಪನಿಯ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ, “ಜಿಂದಾಲ್ ಅವರಿಗೆ ಕಡಿಮೆ ದರದಲ್ಲಿ ಭೂಮಿ ಕೊಡುವುದಕ್ಕೆ ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆ ಆಸ್ತಿನಾ” ಎಂದು ಅರವಿಂದ ಬೆಲ್ಲದ ಪದ ಬಳಕೆ ಮಾಡಿದ್ದರು.
ಕೂಡಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅರವಿಂದ ಬೆಲ್ಲದ, “ಜಿಂದಾಲ್ ಅವರಿಗೆ ಕಡಿಮೆ ದರದಲ್ಲಿ ಭೂಮಿ ಕೊಡುವುದಕ್ಕೆ ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆ ಆಸ್ತಿನಾ ಎಂದು ವೇಗವಾಗಿ ಹೇಳಿರುತ್ತೇನೆ. ಆ ಸಂದರ್ಭದಲ್ಲಿ ಮಾತ್ರ ಬಳಸಿದ ಈ ಪದದ ಬಳಕೆಯು ನನಗೆ ಶೋಭೆ ತಂದಿರುವುದಿಲ್ಲ. ತಮಗೆ ನಾನು ಈ ಪತ್ರದ ಮುಖಾಂತರ ಕ್ಷಮೆಯಾಚಿಸುತ್ತಿದ್ದೇನೆ” ಎಂದು ಕೋರಿದ್ದಾರೆ.