ವಿಧಾನಸಭೆಯ ಉಪಸಭಾಪತಿ ಮತ್ತು ಹಾವೇರಿಯ ಕಾಂಗ್ರೆಸ್ ಶಾಸಕ ರುದ್ರಪ್ಪ ಲಮಾಣಿ ಅವರಿಗೆ ಬೈಕ್ ಅಪಘಾತವಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಹೈವೇಯಲ್ಲಿ ಈ ಘಟನೆ ಸಂಭವಿಸಿದೆ.
ರುದ್ರಪ್ಪ ಲಮಾಣಿ ಕೈ ಕಾಲು, ತಲೆಗೆ ಗಾಯ ಗಂಭೀರ ಗಾಯಗಳಾಗಿವೆ. ಕೂಡಲೇ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬಳಿಕ ದಾವಣಗೆರೆಯ ಎಸ್‌ಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಹೈವೇಯಲ್ಲಿ ಉಪಸಭಾಪತಿ ರುದ್ರಪ್ಪ ಲಮಾಣಿ ಅವರು ಮೂತ್ರ ವಿಸರ್ಜನೆಗೆಂದು ತಮ್ಮ ಕಾರಿನಿಂದ ಇಳಿದಾಗ ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್ ಸಡನ್ ಆಗಿ ಬಂದು ಅವರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ರುದ್ರಪ್ಪ ಲಮಾಣಿ ರಸ್ತೆಗೆ ಬಿದ್ದಿದ್ದು, ಅವರ ತಲೆ, ಕೈಕಾಲುಗಳಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹಿರಿಯೂರು DYSP ಶಿವಕುಮಾರ್, ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್ ಆನಂದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.