ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ ಹೆಚ್ ಡಿ ದೇವೇಗೌಡ. ವಿದೇಶಕ್ಕೆ ಕಳುಹಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
“ಪ್ರಜ್ವಲ್ ರೇವಣ್ಣನಿಗೆ ನನ್ನ ಎಚ್ಚರಿಕೆ, ನನ್ನ ಬಗ್ಗೆ ಪ್ರಜ್ವಲ್ ರೇವಣ್ಣನಿಗೆ ಏನಾದರೂ ಗೌರವವಿದ್ದರೆ ಎಲ್ಲಿದ್ದರೂ ಕೂಡ ಹಿಂದಿರುಗಬೇಕು. ಕಾನೂನನ್ನು ಎದುರಿಸಬೇಕು” ಎಂದು ದೇವೇಗೌಡರು ಪತ್ರ ಬರೆದಿರುವ ವಿಚಾರವಾಗಿ ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿದರು.
ಇದೇ ವೇಳೆ ಕಲುಸಿತ ನೀರು ವಿಚಾರವಾಗಿ ಪ್ರತಿಕ್ರಿಯಿಸಿ, “ಮೈಸೂರು ತಾಲ್ಲೂಕಿನ ಕೆ.ಸಾಲುಂಡಿಯಲ್ಲಿ ಕಲುಷಿತ ನೀರು ಕುಡಿದು ಯುವಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣ ಪಂಚಾಯಿತಿಯ ಮೂವರು ಅಧಿಕಾರಿಗಳನ್ನು ಅಮಾನತು ಮಾಡಿದ್ದೇವೆ. ಪ್ರಕರಣದ ಬಗ್ಗೆ ಜಿಲ್ಲಾಧಿಕಾರಿ ವರದಿ ಕೊಟ್ಟಿದ್ದಾರೆ. ಅದರ ಆಧಾರದ ಮೇಲೆ ಈ ಕ್ರಮ ಕೈಗೊಂಡಿದ್ದೇವೆ” ಎಂದರು.
“ಇನ್ನು ಮುಂದೆ, ಕುಡಿಯುವ ನೀರಿನ ಟ್ಯಾಂಕ್‌ಗಳನ್ನು ನಿಯಮಿತವಾಗಿ ಸ್ವಚ್ಛ ಮಾಡಿಸಬೇಕು ಎಂದು ಆದೇಶಿಸಿದ್ದೇನೆ ಎಂದರು. ಈ ಪ್ರಕರಣದಲ್ಲಿ ಕಲುಷಿತ ನೀರು ಸರಬರಾಜು ಆಗಿದೆ. ಅದನ್ನ ಯಾರೂ ಪರೀಕ್ಷೆಯನ್ನೇ ಮಾಡಿಲ್ಲ. ಹೀಗಾಗಿ ಈ ಘಟನೆ ನಡೆದಿದೆ” ಎಂದು ತಿಳಿಸಿದರು.