ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಡಾ. ಸಿ ಎನ್ ಮಂಜುನಾಥ್ ಅವರನ್ನು ಘೋಷಿಸಿರುವುದಕ್ಕೆ ನನಗೇನು ಅಚ್ಚರಿಯಲ್ಲ. ಮಂಜುನಾಥ್ ಅವರು ದೇವೇಗೌಡರ ಕುಟುಂಬದ ಮತ್ತೊಂದು ಭಾಗ. ಜೆಡಿಎಸ್ ಸರಿಯಿಲ್ಲ ಎಂದು ಅಳಿಯ ಬಿಜೆಪಿ ಸೇರಿದ್ದಾರೆ ಎಂದು ಸಂಸದ ಮತ್ತು ಪ್ರತಿಸ್ಪರ್ಧಿ ಡಿ ಕೆ ಸುರೇಶ್ ಕುಟುಕಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಮಂಜುನಾಥ ಅವರ ರಾಜಕೀಯ ಪ್ರವೇಶದ ಬಗ್ಗೆ ನೀವು ಅವರನ್ನೇ ಕೇಳಬೇಕು. ಅವರ ರಾಜಕೀಯ ಪ್ರವೇಶದ ಬಗ್ಗೆ ನಾನು ಉತ್ತರ ಹೇಳೋದು ಸಮಂಜಸ ಅಲ್ಲ” ಎಂದರು.
“ಮಂಜುನಾಥ್ ಅವರ ರಾಜಕೀಯ ಪ್ರವೇಶವನ್ನು ಸ್ವಾಗತ ಮಾಡುತ್ತೇವೆ. ರಾಜಕಾರಣಿಯನ್ನು ರಾಜಕಾರಣದ ದೃಷ್ಟಿಯಿಂದ ನೋಡಬೇಕು. ದೇವೇಗೌಡರ ಕುಟುಂಬದ ಭಾಗ ಬಿಜೆಪಿಯಲ್ಲಿ ಯಾಕೆ ಸ್ಪರ್ಧೆ ಎಂಬ ಪ್ರಶ್ನೆ ಎದ್ದಿದೆ. ದೇವೇಗೌಡರ ಪಾರ್ಟಿ, ಕುಮಾರಸ್ವಾಮಿ ಪಾರ್ಟಿ ಸರಿ ಇಲ್ಲ ಅಂತ ಬುದ್ಧಿವಂತ ಅಳಿಯ ತೀರ್ಮಾನ ಮಾಡಿದ್ದಾರೆ” ಎಂದರು.