Homeಕರ್ನಾಟಕಧರ್ಮಸ್ಥಳ ಪ್ರಕರಣ | ಎಸ್‌ಐಟಿ ತಂಡ ಸೇರ ಬಯಸದ ಇಬ್ಬರು ಅಧಿಕಾರಿಗಳು

ಧರ್ಮಸ್ಥಳ ಪ್ರಕರಣ | ಎಸ್‌ಐಟಿ ತಂಡ ಸೇರ ಬಯಸದ ಇಬ್ಬರು ಅಧಿಕಾರಿಗಳು

ಧರ್ಮಸ್ಥಳ ಗ್ರಾಮದಲ್ಲಿ ಹೂತಿಟ್ಟ ನೂರಾರು ಶವಗಳ ಪ್ರಕರಣದ ತನಿಖೆಗೆ ರಾಜ್ಯ ಸರಕಾರ ಎಸ್ಐಟಿ ರಚಿಸಿದ ಬೆನ್ನಲ್ಲೇ ತಂಡದ ಇಬ್ಬರು ಐಪಿಎಸ್ ಅಧಿಕಾರಿಗಳು ವೈಯಕ್ತಿಕ ಕಾರಣ ಮುಂದಿಟ್ಟು ತಂಡದಿಂದ ಹೊರಗುಳಿಯಲು ಮುಂದಾಗಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದೆ. ಎಸ್‌ಐಟಿ ತಂಡ ರಚಿಸಿ ದಿನ ಕಳೆಯುವಷ್ಟರಲ್ಲೇ ಆರಂಭಿಕ ವಿಘ್ನ ಎದುರಾಗಿದೆ. ಐಪಿಎಸ್‌ ಅಧಿಕಾರಿಗಳಾದ ಎಂ.ಎನ್ ಅನುಚೇತ್ ಮತ್ತು ಸೌಮ್ಯಲತಾ ಸರ್ಕಾರಕ್ಕೆ ಪತ್ರ ಬರೆಯಲು ಮುಂದಾಗಿದ್ದಾರೆ. ವೈಯಕ್ತಿಕ ಕಾರಣಗಳನ್ನ ನೀಡಿ ಎಸ್‌ಐಟಿ ತಂಡದಿಂದ ತಮ್ಮನ್ನು ಕೈಬಿಡುವಂತೆ ಸೋಮವಾರ ಪತ್ರ ಬರೆಯಲು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಪ್ರಕರಣದ ಸಮಗ್ರ ತನಿಖೆಗೆ ಎಸ್‌ಐಟಿ ರಚಿಸಿದೆ. ಈ ಹಿಂದೆ ಗಂಭೀರ ಪ್ರಕರಣಗಳ ತನಿಖೆಯಲ್ಲಿ ತೋರಿದ ಕರ್ತವ್ಯ ನಿಷ್ಠೆ ಹಾಗೂ ಕಾರ್ಯ ದಕ್ಷತೆ ಆಧರಿಸಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ಈ ಎಸ್‌ಐಟಿಗೆ ಆಯ್ಕೆ ಮಾಡಿದೆ. ಇದೀಗ ಎಸ್‌ಐಟಿಯಿಂದ ಇಬ್ಬರು ಐಪಿಎಸ್ ಅಧಿಕಾರಿಗಳು ಹೊರಬರಲು ಮನಸ್ಸು ಮಾಡಿದ್ದಾರೆ. ಒಂದು ವೇಳೆ ಅವರು ಈಎಸ್‌ಐಟಿಯಿಂದ ತಮ್ಮನ್ನು ಕೈ ಬಿಡುವಂತೆ ಸರ್ಕಾರಕ್ಕೆ ಪತ್ರ ಬರೆದರೆ, ಸರ್ಕಾರ ಆ ಇಬ್ಬರು ಅಧಿಕಾರಿಗಳನ್ನು ಕರೆಸಿ ಮನವೊಲಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments