ಧಾರವಾಡ-ಹುಬ್ಬಳ್ಳಿ ಕ್ಷೇತ್ರದ ಜನತೆ ಪ್ರಲ್ಹಾದ ಜೋಶಿ ಪರವಾಗಿದ್ದಾರೆ. ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಕೈ ಹಾಕಬಾರದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “‘ಧಾರವಾಡ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯದಂತೆ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಮತ್ತೊಮ್ಮೆ ಮನವಿ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಬಾರದೆಂದು ಅವರನ್ನು ಕೋರುವೆ. ಮುಂದೆ ಏನು ತೀರ್ಮಾನ ಕೈಗೊಳ್ಳುತ್ತಾರೆ ನೋಡೋಣ” ಎಂದರು.
“ರಾಜ್ಯದಲ್ಲಿ ಬಿಜೆಪಿ, ಪ್ರಧಾನಿ ಮೋದಿ ಪರವಾದ ಅಲೆ ಇದೆ. ಈ ಕ್ಷೇತ್ರದಲ್ಲಿ ಜೋಶಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಮನೆ ಮನೆಗೆ ಗೊತ್ತಿದೆ. ಅವರೊಬ್ಬ ಪ್ರಬುದ್ಧ ರಾಜಕಾರಣಿಯಾಗಿದ್ದಾರೆ” ಎಂದು ತಿಳಿಸಿದರು.