Homeಕರ್ನಾಟಕಬರಗಾಲ | ನಿರ್ಲಕ್ಷ್ಯ ವಹಿಸಿದ ರಾಜ್ಯ ಸರಕಾರವನ್ನು ಎಚ್ಚರಿಸುತ್ತೇವೆ: ಬಿ ವೈ ವಿಜಯೇಂದ್ರ

ಬರಗಾಲ | ನಿರ್ಲಕ್ಷ್ಯ ವಹಿಸಿದ ರಾಜ್ಯ ಸರಕಾರವನ್ನು ಎಚ್ಚರಿಸುತ್ತೇವೆ: ಬಿ ವೈ ವಿಜಯೇಂದ್ರ

ಕಾಂಗ್ರೆಸ್‌ ಸರ್ಕಾರ ರೈತವಿರೋಧಿ ಸರಕಾರ. ಬಡವರು, ರೈತರು ಈ ಸರಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಬರಗಾಲದ ಕುರಿತು ನಿರ್ಲಕ್ಷ್ಯ ವಹಿಸಿದ ಬಗ್ಗೆ ಸರಕಾರವನ್ನು ಎಚ್ಚರಿಸುವ ಕಾರ್ಯವನ್ನು ರಾಜ್ಯಾಧ್ಯಕ್ಷನಾಗಿ ನಾನು ಮತ್ತು ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮಾಡುತ್ತೇವೆ ಎಂದು ಬಿ ವೈ ವಿಜಯೇಂದ್ರ ಹೇಳಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳು ಮತ್ತು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, “ನಮ್ಮೆಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಹಿರಿಯ ನಾಯಕರು ಒಗ್ಗಟ್ಟಾಗಿ ಮಾಡಲಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯ ಸರಕಾರದ ವಿರುದ್ಧ ಹೋರಾಟ ಹಮ್ಮಿಕೊಳ್ಳುತ್ತೇವೆ” ಎಂದು ಎಚ್ಚರಿಸಿದರು.

“ಮುಂದಿನ ಲೋಕಸಭಾ ಚುನಾವಣೆಯು ಈ ದೇಶದ ದಿಕ್ಕನ್ನು ಬದಲಾಯಿಸುವ ಮಹತ್ವದ ಚುನಾವಣೆ. ಅದು ರಾಜ್ಯದ ರಾಜಕೀಯ ದಿಕ್ಕನ್ನು ಬದಲಾಯಿಸಲಿದೆ. ರಾಜ್ಯ ಮತ್ತು ದೇಶದ ಭವಿಷ್ಯದ ದೃಷ್ಟಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರು 3ನೇ ಬಾರಿಗೆ ದೇಶದ ಪ್ರಧಾನಿ ಆಗಬೇಕು. ರಾಜ್ಯದಲ್ಲಿ 28ಕ್ಕೆ 28 ಸ್ಥಾನಗಳನ್ನು ಬಿಜೆಪಿ ಗೆಲ್ಲುವ ಮೂಲಕ ರಾಜ್ಯ ಸರಕಾರಕ್ಕೆ ತಕ್ಕ ಉತ್ತರ ಕೊಡಬೇಕಾಗಿದೆ” ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments