Homeಕರ್ನಾಟಕಇ.ಡಿ ಅರ್ಜಿ ವಿಚಾರಣೆ, ಬಿ. ನಾಗೇಂದ್ರಗೆ ಹೈಕೋರ್ಟ್ ತುರ್ತು ನೋಟಿಸ್‌ ಜಾರಿ

ಇ.ಡಿ ಅರ್ಜಿ ವಿಚಾರಣೆ, ಬಿ. ನಾಗೇಂದ್ರಗೆ ಹೈಕೋರ್ಟ್ ತುರ್ತು ನೋಟಿಸ್‌ ಜಾರಿ

ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂ.ಗಳ ಅವ್ಯವಹಾರ ಪ್ರಕರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಪಡೆದಿರುವ ಜಾಮೀನು ರದ್ದು ಕೋರಿ ಜಾರಿ ನಿರ್ದೇಶನಾಲಯ(ಇ.ಡಿ) ಹೈಕೋರ್ಟ್ ಮೆಟ್ಟಿಲೇರಿದೆ.

ನ್ಯಾಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಇ.ಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುರುವಾರ ನಡೆಸಿತು. ವಿಚಾರಣೆ ವೇಳೆ ಇ.ಡಿ ಪರ ಹಾಜರಿದ್ದ ಸಹಾಯಕ ಎಸ್​.ವಿ.ರಾಜು ಮತ್ತು ಪಿ. ಪ್ರಸನ್ನಕುಮಾರ್​, ವಿಚಾರಣಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವ ಕ್ರಮವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ ಎಂದು ಪೀಠಕ್ಕೆ ವಿವರಿಸಿದರು.

ವಾದ ಆಲಿಸಿದ ನ್ಯಾಯಪೀಠ, ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಿದಾಗ ಪ್ರತಿವಾದಿಗಳ (ನಾಗೇಂದ್ರ) ವಾದ ಆಲಿಸದೆ ಆದೇಶ ನೀಡುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ತುರ್ತು ನೋಟಿಸ್​ ಜಾರಿ ಮಾಡುತ್ತಿರುವುದಾಗಿ ತಿಳಿಸಿ ವಿಚಾರಣೆಯನ್ನು ನವೆಂಬರ್​ 15ಕ್ಕೆ ಮುಂದೂಡಿತು.

ಈ ಪ್ರಕರಣದಲ್ಲಿ ನಾಗೇಂದ್ರ ಮೊದಲ ಆರೋಪಿಯಾದ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರ ಜಾಮೀನು ಅರ್ಜಿಯನ್ನು, ಶಾಸಕರು-ಸಂಸದರ ವಿರುದ್ದದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಇತ್ತೀಚೆಗಷ್ಟೇ ಪುರಸ್ಕರಿಸಿ ಷರತ್ತುಬದ್ಧ ಜಾಮೀನು ಮಂಜೂರು ನೀಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments