Homeಕರ್ನಾಟಕಮೋದಿ ಹೆಸರಲ್ಲಿ ಮುಸ್ಲಿಂರಿಗೆ ಈದ್ ಕಿಟ್; ಸಚಿವ ದಿನೇಶ್‌ ಗುಂಡೂರಾವ್‌ ಆಕ್ಷೇಪ

ಮೋದಿ ಹೆಸರಲ್ಲಿ ಮುಸ್ಲಿಂರಿಗೆ ಈದ್ ಕಿಟ್; ಸಚಿವ ದಿನೇಶ್‌ ಗುಂಡೂರಾವ್‌ ಆಕ್ಷೇಪ

ಸೌಗತ್-ಎ-ಮೋದಿ ಹೆಸರಲ್ಲಿ ಬಿಜೆಪಿಯ ವರಿಷ್ಠ ನಾಯಕರು ಮುಸ್ಲಿಂರಿಗೆ ಈದ್ ಕಿಟ್ ಕೊಡುತ್ತಿದ್ದಾರೆ. ಇದು ತುಷ್ಠೀಕರಣವಲ್ಲವೆ, ಇದು ಓಲೈಕೆ ರಾಜಕಾರಣವಲ್ಲವೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರಶ್ನಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ 32 ಲಕ್ಷ ಮುಸ್ಲಿಂ ಕುಟುಂಬಗಳಿಗೆ ಮೋದಿ ಹೆಸರಲ್ಲಿ ಈದ್ ಕಿಟ್ ನೀಡಿದ್ದಾರೆ. ಪವಿತ್ರ ರಂಜಾನ್ ಸಮಯದಲ್ಲಿ ಮುಸ್ಲಿಂರಿಗೆ ಈದ್ ಕಿಟ್ ಕೊಡಲಿ. ಇದಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ ಇದೇ ಕಾರ್ಯಕ್ರಮವನ್ನು ಕಾಂಗ್ರೆಸ್‌ನವರು ಮಾಡಿದ್ದರೆ ಪರಿಸ್ಥಿತಿ ಹೇಗಿರುತಿತ್ತು? ಎಂಬುದನ್ನು ಒಮ್ಮೆ ಊಹಿಸಿಕೊಳ್ಳಿ” ಎಂದು ಟ್ವೀಟ್‌ ಮಾಡಿದ್ದಾರೆ.

“ಕಾಂಗ್ರೆಸ್‌ನವರು ಈದ್ ಕಿಟ್ ಕೊಟ್ಟರೆ ಬಿಜೆಪಿಯ ಪುಡಿ ನಾಯಕರು ಇಷ್ಟೊತ್ತಿಗಾಗಲೇ ಬೀದಿಗಿಳಿಯುತ್ತಿದ್ದರು. ಕಾಂಗ್ರೆಸ್ ಮುಸ್ಲಿಮರ ತುಷ್ಠೀಕರಣ ಮಾಡುತ್ತಿದೆ, ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಬೊಂಬಡ ಬಜಾಯಿಸುತ್ತಿದ್ದರು” ಎಂದು ಕುಟುಕಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments