Homeಕರ್ನಾಟಕವಿದ್ಯುತ್‌ ಕಳ್ಳತನ : ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿಗೆ ದಂಡ ವಿಧಿಸಿದ ಬೆಸ್ಕಾಂ

ವಿದ್ಯುತ್‌ ಕಳ್ಳತನ : ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿಗೆ ದಂಡ ವಿಧಿಸಿದ ಬೆಸ್ಕಾಂ

ಮಾಜಿ ಮುಖ್ಯಮಂತ್ರಿ ಎಚ್ ​ಡಿ ಕುಮಾರಸ್ವಾಮಿ ಅವರ ಬೆಂಗಳೂರಿನ ಜೆಪಿ ನಗರದ ನಿವಾಸಕ್ಕೆ ದೀಪಾವಳಿ ದೀಪಾಲಂಕಾರಕ್ಕಾಗಿ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ವಿದ್ಯುತ್ ಕಳ್ಳತನ ಮಾಡಿರುವುದಕ್ಕೆ ಬೆಸ್ಕಾಂ ಕುಮಾರಸ್ವಾಮಿ ಅವರಿಗೆ ದಂಡ ವಿಧಿಸಿದೆ.

ಬೆಸ್ಕಾಂ ಜಾಗೃತಾ ದಳದ ಡಿವೈಎಸ್ ಪಿ ಅನುಷ ನೇತೃತ್ವದಲ್ಲಿ ವಿದ್ಯುತ್ ಬಳಕೆ ಕೌಂಟಿಂಗ್ ಮಾಡಿ, 10 ನಿಮಿಷಕ್ಕೆ​ ಎಷ್ಟು ವಿದ್ಯುತ್ ಬಳಕೆ ಆಗುತ್ತದೆ ಎನ್ನುವುದನ್ನು ಲೆಕ್ಕ ಮಾಡಿ, ಎರಡು ದಿನ ಎಷ್ಟು ಬಳಕೆ ಆಗಿದೆ ಎಂಬುದರ ಲೆಕ್ಕದ ಮೇಲೆ ನ.14 ರಂದು ಅಧಿಕಾರಿಗಳು ರಿಪೋರ್ಟ್ ನೀಡಿದ್ದರು.

ಆ ಪ್ರಕಾರ ಇದೀಗ ಬೆಸ್ಕಾಂ ಇಲಾಖೆ ಕುಮಾರಸ್ವಾಮಿಗೆ 68 ಸಾವಿರ ರೂ. ದಂಡವನ್ನು ವಿಧಿಸಿದ್ದು, ಅದನ್ನು ಏಳು ದಿನಗಳೊಳಗಾಗಿ ಕಟ್ಟುವಂತೆ ಸೂಚಿಸಿದೆ.

ಕುಮಾರಸ್ವಾಮಿ ಅವರು ವಿದ್ಯುತ್‌ ಕಳತನ ಮಾಡಿದ್ದಾರೆ ಎಂದು ವಿಡಿಯೋ ಸಮೇತ ಕಾಂಗ್ರೆಸ್ ಆರೋಪಿಸಿತ್ತು. ಬಳಿಕ ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಕುಮಾರಸ್ವಾಮಿ ಮನೆಗೆ ತೆರಳಿ ಪರಿಶೀಲನೆ ಮಾಡಿ, ಬಳಿಕ ಅವರ ವಿರುದ್ಧ ಎಫ್​ಐಆರ್ ಕೂಡ ದಾಖಲಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments