Homeಕರ್ನಾಟಕಬೆಂಗಳೂರಿನಿಂದ ಹೊರಗೂ ಕೈಗಾರಿಕಾ ಬೆಳವಣಿಗೆಗೆ ಒತ್ತು: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಿಂದ ಹೊರಗೂ ಕೈಗಾರಿಕಾ ಬೆಳವಣಿಗೆಗೆ ಒತ್ತು: ಸಿಎಂ ಡಿ.ಕೆ. ಶಿವಕುಮಾರ್

ಕರ್ನಾಟಕಕ್ಕೆ ಹೆಚ್ಚಿನ ಹೂಡಿಕೆ ಆಕರ್ಷಿಸುವುದರ ಜೊತೆಗೆ ಬೆಂಗಳೂರಿನಿಂದ ಹೊರಗೂ ಕೈಗಾರಿಕಾ ಬೆಳವಣಿಗೆ ಮತ್ತು ಉದ್ಯೋಗಾವಕಾಶಗಳನ್ನು ವಿಸ್ತರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ರಾಜ್ಯದಲ್ಲಿ ಹೂಡಿಕೆ ಆಕರ್ಷಿಸುವ ಅಭಿಯಾನದ ಭಾಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಮತ್ತು ನಿಯೋಗದೊಂದಿಗೆ ಜಪಾನ್‌ನ ಮೊತೊಮಚಿ ಟೊಯೊಟಾ ಘಟಕಕ್ಕೆ ಭೇಟಿ ನೀಡಿ, ಟೊಯೊಟಾ ಮೋಟಾರ್ ಕಾರ್ಪೊರೇಷನ್‌ನ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಟೊಯೊಟಾದ ‘ಗ್ಲೋಬಲ್ ಸ್ಕಿಲ್-ಅಪ್’ ಕಾರ್ಯಕ್ರಮದಡಿ ಜಪಾನ್‌ನಲ್ಲಿ ವಿಶೇಷ ತರಬೇತಿ ಪಡೆಯುತ್ತಿರುವ ಬಿಡದಿ ಟೊಯೊಟಾ ಘಟಕದ 20ಕ್ಕೂ ಹೆಚ್ಚು ಐಟಿಐ ಪ್ರಶಿಕ್ಷಣಾರ್ಥಿಗಳೊಂದಿಗೆ ಸಂವಾದ ನಡೆಸಿದರು. ತರಬೇತಿದಾರರ ಅನುಭವಗಳನ್ನು ಆಲಿಸಿದ ಮುಖ್ಯಮಂತ್ರಿಗಳು, ಜಪಾನ್‌ನಲ್ಲಿ ದೊರೆತಿರುವ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಾಂತ್ರಿಕ ಕೌಶಲ್ಯ ಮತ್ತು ಪರಿಣತಿ ಹೆಚ್ಚಿಸಿಕೊಳ್ಳುವಂತೆ ಪ್ರೋತ್ಸಾಹಿಸಿದರು. ಈ ಮೂಲಕ ಕರ್ನಾಟಕದ ಅಭಿವೃದ್ಧಿಗೆ ಕೊಡುಗೆ ನೀಡುವಂತೆ ಸಲಹೆ ನೀಡಿದರು.

ಕರ್ನಾಟಕಕ್ಕೆ ಹೊಸ ಹೂಡಿಕೆಗಳನ್ನು ಆಕರ್ಷಿಸುವುದು, ರಾಜ್ಯದ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಹಾಗೂ ವಿದೇಶಿ ನೇರ ಹೂಡಿಕೆಗೆ (ಎಫ್‌ಡಿಐ) ಪ್ರಮುಖ ತಾಣವಾಗಿರುವ ಕರ್ನಾಟಕದ ಸ್ಥಾನವನ್ನು ಮತ್ತಷ್ಟು ಬಲಪಡಿಸುವ ಕುರಿತು ಟೊಯೊಟಾ ಮುಖ್ಯಸ್ಥರೊಂದಿಗೆ ಚರ್ಚಿಸಲಾಯಿತು.

‘ಬಿಯಾಂಡ್ ಬೆಂಗಳೂರು’ ಯೋಜನೆಯ ಮೂಲಕ ಕೈಗಾರಿಕಾ ಅಭಿವೃದ್ಧಿ, ಹೂಡಿಕೆ ಮತ್ತು ಉದ್ಯೋಗಾವಕಾಶಗಳನ್ನು ಬೆಂಗಳೂರಿನಿಂದ ಹೊರಗೂ ವಿಸ್ತರಿಸಲು ಸರ್ಕಾರ ಕ್ರಮ ಕೈಗೊಂಡಿದೆ. ರಾಜ್ಯದ ಎಲ್ಲ ಪ್ರದೇಶಗಳಲ್ಲೂ ಸಮತೋಲಿತ ಕೈಗಾರಿಕಾ ಬೆಳವಣಿಗೆ ಸಾಧಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಕೈಗಾರಿಕೆಗಳನ್ನು ಆಕರ್ಷಿಸುವುದು, ಉದ್ಯೋಗ ಸೃಷ್ಟಿಸುವುದು ಮತ್ತು ಬೆಂಗಳೂರಿನಿಂದ ಹೊರಗೆ ಆರ್ಥಿಕ ಅವಕಾಶಗಳನ್ನು ವಿಸ್ತರಿಸುವ ಮೂಲಕ ಕರ್ನಾಟಕದ ಪ್ರತಿಯೊಂದು ಪ್ರದೇಶವನ್ನೂ ರಾಜ್ಯದ ಬೆಳವಣಿಗೆಯ ಪಯಣದಲ್ಲಿ ಪಾಲುದಾರರನ್ನಾಗಿಸುವುದು ಹೂಡಿಕೆ ಅಭಿಯಾನದ ಗುರಿಯಾಗಿದೆ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments