ಮಹಾತ್ಮ ಗಾಂಧಿಯವರಿಗೆ ಗುಂಡಿಕ್ಕಿದ ಗೋಡ್ಸೆ ಸಂತತಿಯವರಾದ ಬಿಜೆಪಿ ನಾಯಕರ ಭಯೋತ್ಪಾದಕ ಮನಸ್ಥಿತಿ ಅನಾವರಣವಾಗಿದೆ ಎಂದು ಕಾಂಗ್ರೆಸ್ ಕೆ ಎಸ್ ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದೆ.
ಸಂಸದ ಡಿ ಕೆ ಸುರೇಶ್ ಹಾಗೂ ಶಾಸಕ ವಿನಯ್ ಕುಲಕರ್ಣಿ ರಾಷ್ಟ್ರದ್ರೋಹಿಗಳು. ಇವರ ಹಾಗೆ ದೇಶ ವಿಭಜನೆಯ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿಕೆ ನೀಡಿದ್ದರು.
ಈ ಕುರಿತು ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್,ಸಂಸದರಾದ ಡಿ. ಕೆ ಸುರೇಶ್ ಹಾಗೂ ಶಾಸಕರಾದ ವಿನಯ್ ಕುಲಕರ್ಣಿಯವರನ್ನು ಗುಂಡಿಕ್ಕಿ ಕೊಲ್ಲಬೇಕು ಎನ್ನುವ ಮೂಲಕ ಬಿಜೆಪಿಯ ಭಯೋತ್ಪಾದನೆಗೆ ಪ್ರಚೋದನೆ ನೀಡುವ ಹೇಳಿಕೆ ನೀಡಿದ್ದಾರೆ. ಈ “ಗುಂಡು“ ಹಾಕುವ ವ್ಯಕ್ತಿಯ ಮೇಲೆ ಭಯೋತ್ಪಾದನೆ ನಿಗ್ರಹ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಬೇಕು” ಎಂದು ಆಗ್ರಹಿಸಿದೆ.
“ಗೃಹ ಸಚಿವ ಪರಮೇಶ್ವರ್ ಅವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಈಶ್ವರಪ್ಪ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು” ಎಂದು ಮನವಿ ಮಾಡಿದೆ.