Homeಕರ್ನಾಟಕಕಾಂಗ್ರೆಸ್ ಪಕ್ಷದ ಮೊಸಳೆಕಣ್ಣೀರು ಅಲ್ಪಸಂಖ್ಯಾತರಿಗೂ ಅರಿವಾಗಿದೆ: ಬಿ ವೈ ವಿಜಯೇಂದ್ರ 

ಕಾಂಗ್ರೆಸ್ ಪಕ್ಷದ ಮೊಸಳೆಕಣ್ಣೀರು ಅಲ್ಪಸಂಖ್ಯಾತರಿಗೂ ಅರಿವಾಗಿದೆ: ಬಿ ವೈ ವಿಜಯೇಂದ್ರ 

ಈ ಉಪ ಚುನಾವಣೆಗಳು ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿಗಳಿಗೆ ಕಬ್ಬಿಣದ ಕಡಲೆ ಆಗಿ ಪರಿವರ್ತನೆ ಆಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಇಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಗ್ಯಾರಂಟಿಯ ಮುಖವಾಡ ಧರಿಸಿ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದ್ದರು. ಈ ಉಪ ಚುನಾವಣೆಗಳು ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿಗಳಿಗೆ ಕಬ್ಬಿಣದ ಕಡಲೆ ಆಗಿ ಪರಿವರ್ತನೆ ಆಗಿವೆ. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ- ಇವೆರಡರ ಪೈಕಿ ಯಾವ ಕ್ಷೇತ್ರ ಉಳಿಸಿಕೊಳ್ಳಬೇಕೆಂದು ಮುಖ್ಯಮಂತ್ರಿಗಳು ಅವರ ಸಚಿವಸಂಪುಟದ ಸದಸ್ಯರು ಗಲಿಬಿಲಿಗೊಂಡಿದ್ದಾರೆ ಎಂದು ವಿಶ್ಲೇಷಿಸಿದರು.

ದಾವಣಗೆರೆಯಲ್ಲಿನ ಮತದಾರರ ಆಕ್ರೋಶವು ಮುಂದಿನ ದಿನಗಳಲ್ಲಿ ರಾಜಕೀಯ ಯಾವ ನಿಟ್ಟಿನಲ್ಲಿ ಸಾಗಲಿದೆ ಎಂಬುದನ್ನು ತೋರಿಸಿಕೊಡುತ್ತದೆ ಎಂದು ಪ್ರಶ್ನೆಗೆ ಉತ್ತರಿಸಿದರು. ಇದು ಬಿಜೆಪಿಗೆ ವರದಾನ ಆಗಲಿದೆ. ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಬಗ್ಗೆ ಮೊಸಳೆಕಣ್ಣೀರು ಹಾಕುವುದು ಅಲ್ಪಸಂಖ್ಯಾತರಿಗೂ ಅರಿವಾಗಿದೆ ಎಂದು ತಿಳಿಸಿದರು.

17 ಬಜೆಟ್ ಮಂಡಿಸಿದ ಅನುಭವಿ ಮುಖ್ಯಮಂತ್ರಿಗಳಿದ್ದರೂ ಸಿದ್ದರಾಮಯ್ಯನವರ ಅನುಭವವನ್ನು ರಾಜ್ಯದ ಅಭಿವೃದ್ಧಿಗೆ ಬಳಸಲು ಸಾಧ್ಯವಾಗಿಲ್ಲ. ರಾಜ್ಯದಲ್ಲಿ ಉಪ ಚುನಾವಣೆ ನಾನಾ ಕಾರಣಕ್ಕೆ ಸುದ್ದಿ ಮಾಡಿದೆ. ಮುಖ್ಯಮಂತ್ರಿಗಳ ನಿದ್ದೆಗೆಡಿಸುವ ಕೆಲಸವನ್ನೂ ಈ ಚುನಾವಣೆಗಳು ಮಾಡಿವೆ ಎಂದು ಹೇಳಿದರು. ಕಾಂಗ್ರೆಸ್ ಸರಕಾರ ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೇ ಇದ್ದರೂ ತನ್ನ ಗ್ಯಾರಂಟಿಗಳೇ ಅಭಿವೃದ್ಧಿ ಎಂದು ಬಿಂಬಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತ ಬಂದಿದೆ ಎಂದು ಆಕ್ಷೇಪಿಸಿದರು.

ಮುಖ್ಯಮಂತ್ರಿ, ಸಚಿವಸಂಪುಟದ ಸದಸ್ಯರು ತಮ್ಮ ವೈಫಲ್ಯವನ್ನು ಮುಚ್ಚಿ ಹಾಕಲು ಕೇಂದ್ರ ಸರಕಾರದ ಮೇಲೆ ಆರೋಪ ಮಾಡುತ್ತ ಬಂದಿದ್ದಾರೆಯೇ ವಿನಾ, ರಾಜ್ಯವು ಅಭಿವೃದ್ಧಿ ಶೂನ್ಯವಾಗಿದೆ ಎಂದು ಟೀಕಿಸಿದರು. ಅಹಿಂದ ಹೆಸರು ಹೇಳಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದ ಮುಖ್ಯಮಂತ್ರಿಗಳು ಹಿಂದುಳಿದ ಸಮುದಾಯಗಳನ್ನು ಯಾವತ್ತೋ ಮರೆತಿದ್ದಾರೆ. ಇವತ್ತು ಅಲ್ಪಸಂಖ್ಯಾತರನ್ನು ಮರೆತಿರುವ ಕುರಿತು ಚರ್ಚೆ ಆಗುತ್ತಿದೆ ಎಂದರು.

ಬಿಜೆಪಿ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಶಕ್ತಿ ಮೀರಿ ಶ್ರಮ ಹಾಕುತ್ತಿದ್ದಾರೆ. ಎಲ್ಲ ಮುಖಂಡರು, ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಒಂದಾಗಿ ಶ್ರೀನಿವಾಸ ದಾಸ ಕರಿಯಪ್ಪ ಅವರ ಪರವಾಗಿ ರಣೋತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ನಮ್ಮ ಕಾರ್ಯಕರ್ತರ ಶ್ರಮದ ಬಗ್ಗೆ ತೃಪ್ತಿ ಇದೆ. ಜೆಡಿಎಸ್ ಕಾರ್ಯಕರ್ತರೂ ಕೈ ಜೋಡಿಸಿದ್ದಾರೆ. ಇಲ್ಲಿ ಕಾಂಗ್ರೆಸ್ಸಿನ ಹಣದ ಆಮಿಷಕ್ಕೆ ಬಲಿ ಆಗಲು ಸಾಧ್ಯವಿಲ್ಲ. ನಾವು ಐತಿಹಾಸಿಕ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸದಿಂದ ತಿಳಿಸಿದರು.

ಬಾಗಲಕೋಟೆಯಲ್ಲೂ ಹಗಲೂ ರಾತ್ರಿ ನಮ್ಮ ಕಾರ್ಯಕರ್ತರು ಶ್ರಮ ಹಾಕುತ್ತಿದ್ದಾರೆ. ಮುಖಂಡರೂ ಒಂದಾಗಿ ಚುನಾವಣೆ ಎದುರಿಸುತ್ತಿದ್ದಾರೆ. ಈ ಉಪ ಚುನಾವಣೆಯು ಕಾಂಗ್ರೆಸ್ ಪಕ್ಷದ ನಾಗಾಲೋಟಕ್ಕೆ ಕಡಿವಾಣ ಹಾಕಲಿದೆ ಎಂದು ಹೇಳಿದರು. ಬಿಜೆಪಿ ಅಭ್ಯರ್ಥಿಗಳು ವಿಜಯಶಾಲಿ ಆಗಲಿದ್ದಾರೆ ಎಂದರು.

ಏ. 6, 1980 ಬಿಜೆಪಿಯ ಸಂಸ್ಥಾಪನಾ ದಿನ. ರಾಜ್ಯದ 224 ಕ್ಷೇತ್ರಗಳು ಮಾತ್ರವಲ್ಲದೇ ಇಡೀ ದೇಶದಲ್ಲಿ ಬಹಳ ಅರ್ಥಪೂರ್ಣವಾಗಿ ಈ ಸಂಸ್ಥಾಪನಾ ದಿನವನ್ನು ಆಚರಿಸುತ್ತಿದ್ದೇವೆ. ಬಿಜೆಪಿ, ಜಗತ್ತಿನ ಅತ್ಯಂತ ದೊಡ್ಡ ರಾಜಕೀಯ ಪಕ್ಷವಾಗಿ ಬೆಳೆದುನಿಂತಿದೆ ಎಂದು ವಿವರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments