Homeಕರ್ನಾಟಕಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ರಜುವಾತು; ಜಾರ್ಜ್​ಶೀಟ್​ ಸಲ್ಲಿಕೆ

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ರಜುವಾತು; ಜಾರ್ಜ್​ಶೀಟ್​ ಸಲ್ಲಿಕೆ

ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನಗೆ ಸಂಕಷ್ಟ ಎದುರಾಗಿದೆ. ಮುನಿರತ್ನ ವಿರುದ್ಧ ಕೇಳಿಬಂದಿರುವ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ತನಿಖೆಯಲ್ಲಿ ರಜುವಾತಾಗಿದೆ ಎಂದು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ವಿಶೇಷ ತನಿಖಾ ತಂಡ ಆರೋಪ ಪಟ್ಟಿ ಸಲ್ಲಿಸಿದೆ.

ತಮ್ಮ ವಿರೋಧಿಗಳನ್ನು ಹೆಚ್​ಐವಿ-ಏಡ್ಸ್ ​​ಪೀಡಿತರ ಮೂಲಕ ಹನಿಟ್ರ್ಯಾಪ್​​ ಬಲಗೆ ಬೀಳಿಸಿ ಏಡ್ಸ್​​ ಹರಡುವಿಕೆಗೆ ಶಾಸಕ ಮುನಿರತ್ನ ದುಷ್ಕೃತ್ಯ ಎಸಗಿದ್ದರು ಎಂದು ಎಸ್​ಐಟಿ ಸಲ್ಲಿಸಿದ ಚಾರ್ಜ್​​​ಶೀಟ್​ನಲ್ಲಿ ಉಲ್ಲೇಖವಾಗಿದೆ. ಶಾಸಕ ಮುನಿರತ್ನ ಕೃತ್ಯಕ್ಕೆ ನೆರವು ನೀಡಿದ ಆರೋಪದ ಹೊತ್ತಿದ್ದ ಪ್ರಕರಣದ ಎ3 ಸುಧಾಕರ್, ಎ7 ಪಿ.ಶ್ರೀನಿವಾಸ್ ಮತ್ತು ಎ8 ಇನ್ಸ್​ಪೆಕ್ಟರ್​ ಐಯ್ಯಣ್ಣ ರೆಡ್ಡಿ ವಿರುದ್ಧ ದಾಖಲಾದ ಆಪಾದನೆ ಕೂಡ ತನಿಖೆಯಲ್ಲಿ ಸಾಬೀತಾಗಿದೆ. ಸದ್ಯ ಇನ್ಸ್​​ಪೆಕ್ಟರ್​​ ಬಿ. ಐಯ್ಯಣ್ಣ ರೆಡ್ಡಿಯನ್ನು ಎಸ್​ಐಟಿ ಪೊಲೀಸರು ಬಂಧಿಸಿದ್ದಾರೆ.

ಸೆಪ್ಟೆಂಬರ್ 18ರಂದು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಒಟ್ಟು ಏಳು ಜನರ ವಿರುದ್ಧ ಅತ್ಯಾಚಾರ ಆರೋಪ ಮಾಡಿ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆಗೆ ಸರ್ಕಾರ ಎಸ್​​ಐಟಿ ರಚಿಸಿತ್ತು. ಈ ಬಗ್ಗೆ ತನಿಖೆ ನಡೆಸಿದ ಎಸ್​ಐಟಿ, ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಹಾಗೂ ಅವರ ಸಹಚರರ ಮೇಲೆ ಕೃತ್ಯಕ್ಕೆ ಸಹಕರಿಸಿದ ಆರೋಪದಡಿ ಆರೋಪ ಪಟ್ಟಿ ಸಲ್ಲಿಸಿದೆ. ಪ್ರಕರಣ ಸಂಬಂಧ ಎಸ್​ಐಟಿ 146 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿತ್ತು. ಇದರಲ್ಲಿ ನ್ಯಾಯಾಧೀಶರ ಮುಂದೆ ಸಿಆರ್​ಪಿಸಿ 164ರಡಿ 8 ಜನರ ಸಾಕ್ಷಿದಾರರು ಹೇಳಿಕೆ ನೀಡಿದ್ದಾರೆ. 850 ದಾಖಲೆ ಒಳಗೊಂಡ 2,481 ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ ಎಸ್​ಐಟಿ ಸಲ್ಲಿಕೆ ಮಾಡಿದೆ.

376(2)ಎನ್ (ನಿರಂತರ ಅತ್ಯಾಚಾರ), 3081202 (ಅಪರಾಧಿಕ ಸಂಚು), 504 (ಉದ್ದೇಶ ಪೂರ್ವಕ ಅವಮಾನ), 506 (ಜೀವ ಬೆದರಿಕೆ), 270 (ಅಪಾಯಕಾರಿ ರೋಗ ಹರಡುವಿಕೆ. ಆರೋಪಿಗಳ ವಿರುದ್ಧ ಪ್ರಮುಖವಾಗಿ ಲೈಂಗಿಕ ಕಿರುಕುಳಕ್ಕಾಗಿ ಐಪಿಸಿ 354ಎ, ಅನುಮತಿ ಇಲ್ಲದೆ ಮಹಿಳೆ ಯ ಅಶ್ಲೀಲ ದೃಶ್ಯ ಸೆರೆಹಿಡಿದಿರುವುದಕ್ಕೆ ಸೆಕ್ಷನ್ 354 ಸಿ, ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರವೆಸಗಿದ್ದಕ್ಕಾಗಿ ಐಪಿಸಿ ಸೆಕ್ಷನ್ 376 (2) (n), ಸಂತ್ರಸ್ತೆಯ ಕೊಲ್ಲುವ ಉದ್ದೇಶಕ್ಕೆ ಸೆಕ್ಷನ್ 308, ಅಪರಾಧಿಕ ಒಳಸಂಚಿಗೆ ಸೆಕ್ಷನ್ 120 B, ಉದ್ದೇಶಪೂರ್ವಕವಾಗಿ ಅವಮಾನಕ್ಕಾಗಿ ಸೆಕ್ಷನ್ 504, ಜೀವಕ್ಕೆ ಅಪಾಯಕಾರಿ ಕಾಯಿಲೆಯ ಸೋಂಕನ್ನು ಹರಡುವ ಮಾರಣಾಂತಿಕ ಕೃತ್ಯಕ್ಕಾಗಿ ಸೆಕ್ಷನ್ 270 ಮತ್ತು ವ್ಯಕ್ತಿಯ ಖಾಸಗಿ ಚಿತ್ರವನ್ನ ಒಪ್ಪಿಗೆಯಿಲ್ಲದೆ ಸೆರೆಹಿಡಿದಿದ್ದಕ್ಕೆ ಐಟಿ ಕಾಯ್ದೆ 2000ರ ಸೆಕ್ಷನ್ 66E ಅಡಿಯಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

ಮುನಿರತ್ನ ವಿರುದ್ಧ ಅತ್ಯಾಚಾರ, ಜಾತಿ ನಿಂದನೆ, ಬೆದರಿಕೆ ಹಾಗೂ ಹನಿಟ್ರ್ಯಾಪ್​ ಯತ್ನ ಸೇರಿ 4 ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್​ಗೆ ಜಾತಿನಿಂದನೆ ಹಾಗೂ ಬಿಜೆಪಿ ಕಾರ್ಯಕರ್ತೆ ಮೇಲಿನ ಅತ್ಯಾಚಾರ ಪ್ರಕರಣಗಳ ತನಿಖೆಯನ್ನು ಪೂರ್ಣಗೊಳಿಸಿ ಸಿಐಡಿ ನವೆಂಬರ್​ 30ರಂದು ಚಾರ್ಜ್​ಶೀಟ್ ಸಲ್ಲಿಕ್ಕೆ ಮಾಡಿತ್ತು. ಸದ್ಯ ಗುತ್ತಿಗೆದಾರನ ಬಳಿ ಲಂಚ ಕೇಳಿದ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಅನುಮತಿಗೆ ಎಸ್​ಐಟಿ ಕಾಯುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments