Homeಕರ್ನಾಟಕಎಪಿಎಲ್‌ ಕುಟುಂಬಗಳಿಗೂ ಕೆಎಫ್‌ಡಿ ಉಚಿತ ಚಿಕಿತ್ಸೆ ವಿಸ್ತರಣೆ: ದಿನೇಶ್‌ ಗುಂಡೂರಾವ್

ಎಪಿಎಲ್‌ ಕುಟುಂಬಗಳಿಗೂ ಕೆಎಫ್‌ಡಿ ಉಚಿತ ಚಿಕಿತ್ಸೆ ವಿಸ್ತರಣೆ: ದಿನೇಶ್‌ ಗುಂಡೂರಾವ್

ಮಲೆನಾಡು ಭಾಗಗಳಲ್ಲಿ ಹೆಚ್ಚು ಕಾಡುತ್ತಿರುವ ಕ್ಯಾಸನೂರು ಫಾರೆಸ್ಟ್‌ ಡಿಸೀಸ್ (ಕೆಎಫ್‌ಡಿ) ನಿಯಂತ್ರಣಕ್ಕೆ ನಮ್ಮ ಸರ್ಕಾರ ಸರ್ವ ಪ್ರಯತ್ನಗಳನ್ನು ನಡೆಸುತ್ತಿದೆ. ರೋಗದಿಂದ ಬಾಧಿತರಾದವರಿಗೆ ಚಿಕಿತ್ಸೆ ಉಚಿತವಾಗಿದ್ದು, ಈ ಯೋಜನೆಯನ್ನು ಎಪಿಎಲ್‌ ಕುಟುಂಬಗಳಿಗೂ ವಿಸ್ತರಿಸಲಾಗಿದೆ‌ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೆಎಫ್‌ಡಿ ಬಾಧಿತ ಎಪಿಎಲ್ ಕುಟುಂಬದ ಸದಸ್ಯರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಅಡಿ ನೋಂದಾಯಿಸಿಕೊಂಡಿರುವ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ದೊರೆಯಲಿದೆ. ಇದರಿಂದ ನೂರಾರು ಕುಟುಂಬಗಳಿಗೆ ಸಹಾಯವಾಗಲಿದೆ ಎಂದು ಎಕ್ಸ್‌ ತಾಣದಲ್ಲಿ ಬರೆದುಕೊಂಡಿದ್ದಾರೆ.

“ಈಗಾಗಲೇ ಮಂಗನ ಕಾಯಿಲೆ ವಿರುದ್ಧ ನಿರ್ಣಾಯಕ ಹೆಜ್ಜೆಯಿಟ್ಟಿರುವ ನಮ್ಮ ಸರ್ಕಾರ ಐಸಿಎಂಆರ್ ಜೊತೆಗೆ ಚರ್ಚೆ ನಡೆಸಿದ್ದು, ಪ್ರಯೋಗಗಳ ಬಳಿಕ 2026ರ ವೇಳೆಗೆ ಕೆಎಫ್‌ಡಿ ಲಸಿಕೆ ಸಿಗಲಿದೆ. ರಾಜ್ಯದ ಜನರ ಆರೋಗ್ಯ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments