ಬಾಲಿವುಡ್‌ನ ಖ್ಯಾತ ನಟಿ ಹಾಗೂ ಮಾಡೆಲ್ ಶೆಫಾಲಿ ಜರಿವಾಲಾ ಶುಕ್ರವಾರ ತಡರಾತ್ರಿ ಹೃದಯಘಾತದಿಂದ ನಿಧನ ಹೊಂದಿದ್ದಾರೆ.
42 ವರ್ಷದ ಶೆಫಾಲಿ ಮುಂಬೈನ ಅಂಧೇರಿ ಲೋಖಂಡ್‌ವಾಲಾದಲ್ಲಿ ವಾಸಿಸುತ್ತಿದ್ದರು. ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಶೆಫಾಲಿ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅಷ್ಟು ಹೊತ್ತಿಗಾಗಲೇ ಶೆಫಾಲಿ ಕೊನೆಯುಸಿರೆಳೆದಿದ್ದರು. ಶೆಫಾಲಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೂಪರ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ಶೆಫಾಲಿ ಜರಿವಾಲಾ ಅವರು ಕನ್ನಡದಲ್ಲಿ ನಟ ಪುನೀತ್ ರಾಜ್ಕುಮಾರ್ ನಟನೆಯ ‘ಹುಡುಗರು’ ಚಿತ್ರದಲ್ಲಿ ‘ನಾ ಬೋರ್ಡು ಇರದ ಬಸ್ಸನು’ಹಾಡಿಗೆ ಹೆಜ್ಜೆ ಹಾಕಿದ್ದರು. ಹಿಂದಿ ಬಿಗ್ ಬಾಸ್ 13ರ ಸ್ಪರ್ಧಿಯಾಗಿದ್ದರು.
2002ರಲ್ಲಿ ಕಾಂತ ಲಗಾ ಎನ್ನುವ ಹಾಡಿನ ಮೂಲಕ ಶೆಫಾಲಿ ಜರಿವಾಲಾ ಹೆಚ್ಚು ಪ್ರಖ್ಯಾತಿಯನ್ನು ಪಡೆದಿದ್ದರು. ಹಲವಾರು ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿದ್ದರು. ಪರಾಗ್ ತ್ಯಾಗಿ, ಶೆಫಾಲಿ ಜರಿವಾಲಾ ಟೆಲಿವಿಷನ್ ಹಾಗೂ ಸಿನಿಮಾ ಎರಡರಲ್ಲೂ ಕೆಲಸ ಮಾಡುತ್ತಿದ್ದರು.
1982ರ ಡಿಸೆಂಬರ್ 15ರಂದು ಜನಿಸಿದ ಶೆಫಾಲಿ ಬೆಳೆದಿದ್ದು ಮುಂಬೈನಲ್ಲಿ. 2004ರಲ್ಲಿ ಹರ್ಮೀತ್ ಸಿಂಗ್ ಜೊತೆ ಶೆಫಾಲಿ ವಿವಾಹ. ಆ ಬಳಿಕ ಪತಿಯೊಂದಿಗೆ ವಿಚ್ಛೇದನ ಪಡೆದು 2014ರಲ್ಲಿ ಪರಾಗ್ ತ್ಯಾಗಿ ಅವರನ್ನು ಶೆಫಾಲಿ ಮದುವೆಯಾಗಿದ್ದರು.