Homeಕರ್ನಾಟಕಭಯದಿಂದ ಬಿಜೆಪಿ-ಜೆಡಿಎಸ್ ಒಂದು, ಜನತೆ ಈ ಮೈತ್ರಿಯನ್ನು ಸೋಲಿಸಬೇಕು: ಸಿದ್ದರಾಮಯ್ಯ

ಭಯದಿಂದ ಬಿಜೆಪಿ-ಜೆಡಿಎಸ್ ಒಂದು, ಜನತೆ ಈ ಮೈತ್ರಿಯನ್ನು ಸೋಲಿಸಬೇಕು: ಸಿದ್ದರಾಮಯ್ಯ

ಕರ್ನಾಟಕದಲ್ಲಿ ಸೋಲುವ ಭಯದಿಂದ ಬಿಜೆಪಿ-ಜೆಡಿಎಸ್ ಒಂದಾಗಿದೆ. ಇವರನ್ನು ಜನತೆ ಸೋಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.

ಮೈಸೂರಿನಲ್ಲಿ ಅನ್ಯ ಪಕ್ಷಗಳ ವಿವಿಧ ಮುಖಂಡರುಗಳ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, “ಕಾಂಗ್ರೆಸ್ ಸಿದ್ದಾಂತವನ್ನು ಒಪ್ಪಿ ಯಾವುದೇ ಷರತ್ತು ವಿಧಿಸದೇ ಕಾಂಗ್ರೆಸ್ ಸೇರಿದವರನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ” ಎಂದರು.

“ಸ್ಥಾನಮಾನಕ್ಕಾಗಿ ಅಲ್ಲದೇ ಕಾಂಗ್ರೆಸ್ ಪಕ್ಷ ಬಿಜೆಪಿ ಬಿಡಲು ಅಲ್ಲಿ ಗೌರವಯುತವಾಗಿ ನಡೆಸಿಕೊಳ್ಳಲಿಲ್ಲ ಹಾಗೂ ಪಕ್ಷ ಬಡವರ ಪರವಾಗಿದೆ ಎಂಬ ಕಾರಣಕ್ಕಾಗಿ ಕಾಂಗ್ರೆಸ್ ಸೇರಿದ್ದಾರೆ. ರಾಜಕೀಯ, ಸಾಮಾಜಿಕ ಕೇತ್ರದಲ್ಲಿ ಮೂರು ದಶಕಗಳಿಂದ ತೊಡಗಿಸಿಕೊಂಡಿರುವ ರಾಜೀವ್ ಅವರು ಕಾಂಗ್ರೆಸ್ಸಿನ ಕಾರ್ಯಕ್ರಮಗಳನ್ನು ಒಪ್ಪಿಕೊಂಡು ಪಕ್ಷಕ್ಕೆ ಸೇರ್ಪಡೆಯಾಗಿರುವುದು ಒಳ್ಳೆಯ ಬೆಳವಣಿಗೆ” ಎಂದು ಹೇಳಿದರು.

“ಕಾಂಗ್ರೆಸ್ ಪಕ್ಷಕ್ಕೆ ರಾಜೀವ್ ಮತ್ತು ಇತರೆ ನಾಯಕರ ಸೇರ್ಪಡೆಯಿಂದಾಗಿ ಶಕ್ತಿ ಬಂದಂತಾಗಿದೆ. ಲೋಕಸಭಾ ಚುನಾವಣೆಯಲ್ಲಿ ರಾಜೀವ್ ಅವರು ಸೇರಿರುವುದರಿಂದ ಕೃಷ್ಣರಾಜ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಲಕ್ಷ್ಮಣ್ ಗೆಲ್ಲುವ ವಿಶ್ವಾಸವಿದೆ” ಎಂದರು.

“ಬಾಯಿಯಲ್ಲಿ ಮಾತ್ರ ಸಬ್ ಕಾ ಸಾಥ್ ಬಿಜೆಪಿಯವರು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಹೇಳುತ್ತಾರೆ. ಬುರ್ಖಾ, ಗಡ್ಡ, ಶಿಲುಬೆ ಹಾಕಿದವರು ಬರಬಾರದು ಎನ್ನುತ್ತಾರೆ. ಇದು ಯಾವ ಸಬ್ ಕಾ ಸಾಥ್” ಎಂದು ಪ್ರಶ್ನಿಸಿದರು.

“ದೇಶದಲ್ಲಿ ಹೆಚ್ಚು ಸುಳ್ಳು ಹೆಳುವ ಪ್ರಧಾನಿ ನರೇಂದ್ರ ಮೋದಿ. ಸುಳ್ಳು ಬಿಜೆಪಿಯ ಮನೆದೇವರು. 15 ಲಕ್ಷ ಪ್ರತಿ ಕುಟುಂಬದ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದಿದ್ದರು. ಅಚ್ಚೇ ದಿನ್ ಬರುತ್ತದೆ ಎಂದರು- ಬಂತೇ? ಗ್ಯಾಸ್, ಗೊಬ್ಬರ, ಬೆಲೆ ಏರಿದರು, ರೂಪಾಯಿ ಬೆಲೆ ಕುಸಿಯಿತು. ಇಂದಿನವರೆಗೆ ಏನೂ ಮಾಡಿಲ್ಲ. ರೈತರ ಆದಾಯ ದುಪ್ಪಟ್ಟು ಮಾಡುತ್ತೇನೆ, ಭಾರತದ ಆರ್ಥಿಕತೆಯನ್ನು 5 ಟ್ರಿಲಿಯನ್ ಡಾಲರ್ ಗೆ ಕೊಂಡೊಯ್ಯುತ್ತೇನೆ ಎಂದರು. ಆಗಿದೆಯೇ? ಯುವಕರಿಗೆ ಪ್ರತಿ ವರ್ಷ 20 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದವರಿಗೆ ಇಂದಿನವರೆಗೆ ಮಾಡಲಾಗಿಲ್ಲ. ನರೇಂದ್ರ ಮೋದಿಯವರು ನುಡಿದಂತೆ ನಡೆದಿಲ್ಲ. ಬಿಜೆಪಿಗೆ ಮತ ಹಾಕಬೇಕೆ” ಎಂದು ಜನರನ್ನು ಪ್ರಶ್ನಿಸಿದಾಗ ಅವರು ಇಲ್ಲ ಎಂದು ಕೂಗಿದರು.

ದೇವೇಗೌಡರ ಅನುಕೂಲಸಿಂಧು ರಾಜಕಾರಣ

“ಜಿಡಿಎಸ್ ಅಂದರೆ ಜಾತ್ಯಾತೀತ ಜನತಾದಳ ಇಂದು ಜಾತ್ಯಾತೀತವಾಗಿ ಉಳಿದಿದೆಯೇ? ನರೇಂದ್ರ ಮೋದಿ ಪ್ರಧಾನಿಯಾದರೆ ದೇಶವನ್ನೇ ಬಿಟ್ಟು ಹೋಗುತ್ತೇನೆ, ನಾನು ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟುತ್ತೇನೆ ಎಂದಿದ್ದ ಮಾಜಿ ಪ್ರಧಾನಿ ದೇವೇಗೌಡರ ಅನುಕೂಲಸಿಂಧು ರಾಜಕಾರಣ ಎಲ್ಲಿಯವರೆಗೆ ನಡೆಯುತ್ತದೆ ಎಂದರು. ಮೇಕೆದಾಟು ಯೋಜನೆಯನ್ನು ಎನ್‍ಡಿಎ ಮೂಲಕ ಮಾಡಿಸುವುದಾಗಿ ಹೇಳುತ್ತಾರೆ. ಬಿಜೆಪಿ ಕಡೆಯಿಂದ ಯಾಕೆ ಮಾಡಿಸಲಿಲ್ಲ” ಎಂದು ಪ್ರಶ್ನಿಸಿದರು.

ರಾಜೀವ್, ಮಲ್ಲೇಶ್, ಬೈರಪ್ಪ, ಓಂಪ್ರಕಾಶ್ ಸೇರಿದಂತೆ ಸಾವಿರಾರು ಜನ ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಪಕ್ಷ ಸೇರ್ಪಡೆ ಕಾರ್ಯಕ್ರದಲ್ಲಿ ಸಚಿವ ವೆಂಕಟೇಶ್, ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ ತನ್ವೀರ್ ಸೇಠ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮೂರ್ತಿ, ಮೈಸೂರು ಗ್ರಾಮೀಣ ಜಿಲ್ಲಾ ಅಧ್ಯಕ್ಷರಾದ ವಿಜಯಕುಮಾರ್ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments