Homeಕರ್ನಾಟಕಸಿಎಂ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲು

ಸಿಎಂ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲು

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ.

ಶಾಸಕರು ಸಂಸದರ ವಿರುದ್ಧ ಕ್ರಿಮಿನಲ್‌ ವಿಚಾರಣೆಯ ವಿಶೇಷ ನ್ಯಾಯಾಲಯದಲ್ಲಿ ಗುರುವಾರ ಮೈಸೂರಿನ ಆರ್‌ಟಿಐ ಕಾರ್ಯಕರ್ತ ಸ್ನೇಯಮಯಿ ಕೃಷ್ಣ ಎಂಬುವವರು ದೂರು ದಾಖಲಿಸಿದ್ದಾರೆ.

ದೂರನ್ನು ಸ್ವೀಕರಿಸಿದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರು ದಾಖಲೆಗಳ ಪರಿಶೀಲನೆಗೆ ಒಪ್ಪಿಸಿದ್ದಾರೆ. ದಾಖಲೆಗಳ ಪರಿಶೀಲನೆಯ ಬಳಿಕ ಆ.9 ಅಥವಾ 10 ರಂದು ಪ್ರಕರಣವನ್ನು ನ್ಯಾಯಾಲಯ ವಿಚಾರಣೆ ನಡೆಸಲಿದೆ.

ಸ್ನೇಹಮಯಿ ಕೃಷ್ಣ ಯಾರು?

ಮೈಸೂರು ಮೂಲದ ಸ್ನೇಹಮಯಿ ಕೃಷ್ಣ ಆರ್‌ಟಿಐ ಕಾರ್ಯಕರ್ತ ಎಂದು ಗುರುತಿಸಿಕೊಂಡಿದ್ದಾತರೆ. ಈಗಾಗಲೇ ಸಿಎಂ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರಿಗೆ ದೂರು ನೀಡಿದ್ದಾರೆ. ಅಕ್ರಮ ಡಿನೋಟಿಫೈ ಪ್ರಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments