Homeಕರ್ನಾಟಕಲಕ್ಷ್ಮಿ ಹೆಬ್ಬಾಳ್ಕರ್‌ ಆಪ್ತ ಸೇರಿ 10 ಮಂದಿ ವಿರುದ್ಧ ಎಫ್‌ಐಆರ್‌

ಲಕ್ಷ್ಮಿ ಹೆಬ್ಬಾಳ್ಕರ್‌ ಆಪ್ತ ಸೇರಿ 10 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿಯ ಸುವರ್ಣಸೌಧದಲ್ಲಿ ಬಿಜೆಪಿ ಎಂಎಲ್‌ಸಿ ಸಿ ಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಪ್ರಕರಣದ ಸಂಬಂಧ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಆಪ್ತ ಸೇರಿ 10 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಸಿ ಟಿ ರವಿ ಅಶ್ಲೀಲ ಪದ ಬಳಕೆ ಆರೋಪ ಕೇಳಿಬಂದ ಬಳಿಕ ಸುವರ್ಣಸೌಧದಲ್ಲಿ ಭಾರೀ ಹೈಡ್ರಾಮಾ ನಡೆದಿತ್ತು. ಲಕ್ಷ್ಮಿ ಹೆಬ್ಬಾಳ್ಕರ್‌ ಬೆಂಬಲಿಗರು ಸೌಧದೊಳಕ್ಕೆ ನುಗ್ಗಿ ಹಲ್ಲೆಗೆ ಯತ್ನಿಸಿದ್ದರು. ಅಲ್ಲದೇ ಹಿರೇಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ಶಾಸಕರ ವಿರುದ್ಧ ಪ್ರಕರಣ ಸಹ ದಾಖಲಾಗಿತ್ತು.

ಖಾನಾಪುರ ಪೊಲೀಸ್ ಠಾಣೆಗೆ ಸಿ ಟಿ ರವಿ ಲಿಖಿತ ದೂರು ಸಲ್ಲಿಸಿದ್ದರು. ಈ ಪ್ರಕರಣವನ್ನು ಹಿರೇಬಾಗೇವಾಡಿ ಠಾಣೆಗೆ ವರ್ಗಾಯಿಸಲಾಗಿತ್ತು. ನಿನ್ನೆ ಸಂಜೆ ಸಿ ಟಿ ರವಿ ಅವರು ನೀಡಿದ್ದ ಲಿಖಿತ ದೂರಿನ ಪ್ರತಿ ಪೋಸ್ಟ್‌ ಮೂಲಕ ಪೊಲೀಸರ ಕೈ ಸೇರಿದ ಬೆನ್ನಲ್ಲೇ ಬೆಳಗಾವಿ ಹಿರೇಬಾಗೇವಾಡಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments