Homeಕರ್ನಾಟಕಅನಧಿಕೃತ ಜಾಹೀರಾತು ಅಳವಡಿಸಿರುವವರ ಮೇಲೆ ಎಫ್.ಐ.ಆರ್: ತುಷಾರ್ ಗಿರಿನಾಥ್

ಅನಧಿಕೃತ ಜಾಹೀರಾತು ಅಳವಡಿಸಿರುವವರ ಮೇಲೆ ಎಫ್.ಐ.ಆರ್: ತುಷಾರ್ ಗಿರಿನಾಥ್

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವವರ ಮೇಲೆ ಎಫ್.ಐ.ಆರ್ ದಾಖಲಿಸಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸೋಮವಾರ ಪಾಲಿಕೆ ಕೇಂದ್ರ ಕಛೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ತಡೆಯಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾಲಿಕೆಯ ಎಲ್ಲ 8 ವಲಯಗಳಲ್ಲಿಯೂ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವುದನ್ನು ಗುರುತಿಸಿ ಕೂಡಲೆ ಅದನ್ನು ತೆರವುಗೊಳಿಸಬೇಕು. ಜೊತೆಗೆ ಅನಧಿಕೃತ ಜಾಹೀರಾತು ಅಳವಡಿಸಿರುವವರ ಮೇಲೆ ಎಫ್.ಐ.ಆರ್ ದಾಖಲಿಸಬೇಕೆಂದು ಸೂಚಿಸಲಾಯಿತು.

ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಿ

ಪಾಲಿಕೆ ವ್ಯಾಪ್ತಿಯ 8 ವಲಯಗಳಲ್ಲಿ ಸಮೀಕ್ಷೆಯ ಮೂಲಕ 27,655 ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ. ಗುರುತಿಸಿರುವ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಿ ಅವರಿಗೆ ನಿಗದಿಪಡಿಸಿರುವ ಸ್ಥಳದಲ್ಲೇ ಮಾರಾಟ ಮಾಡಲು ಕ್ರಮವಹಿಸಬೇಕೆಂದು ಸೂಚನೆ ನೀಡಲಾಯಿತು.

ಒಂಟಿ ಮನೆ ಯೋಜನೆ ಅನುಷ್ಠಾನ

ನಗರದಲ್ಲಿ ಒಂಟಿ ಮನೆ ಯೋಜನೆಗಳಿಗೆ ಅರ್ಜಿಗಳನ್ನು ಸಲ್ಲಿಸಿರುವ ಪೈಕಿ, ಅರ್ಹ ಫಲಾನುಭವಿಗಳನ್ನು ಕೂಡಲೆ ಗುರುತಿಸಬೇಕು. ಅನಂತರ ಹಂತ-ಹಂತವಾಗಿ ಅನುದಾನ ಬಿಡುಗಡೆಗೊಳಿಸಲು ಅಗತ್ಯ ಕ್ರಮವಹಿಸಬೇಕೆಂದು ಸೂಚಿಸಲಾಯಿತು.

ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರಿತಿ ಗೆಹ್ಲೋಟ್, ವಲಯ ಆಯುಕ್ತರಾದ ಸತೀಶ್, ಅರ್ಚನಾ, ಸ್ನೇಹಲ್, ವಿನತ್ ಪ್ರಿಯಾ, ರಮ್ಯಾ, ರಮೇಶ್, ಕರೀಗೌಡ, ಪ್ರಧಾನ ಅಭಿಯಂತರರು, ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments