Homeಕರ್ನಾಟಕಸಣ್ಣ ಊರಿನ ಪತ್ರಕರ್ತರ ಸಮಸ್ಯೆ ಪರಿಹಾರಕ್ಕೆ ಮೊದಲ ಆದ್ಯತೆ: ಕೆ ವಿ ಪ್ರಭಾಕರ್

ಸಣ್ಣ ಊರಿನ ಪತ್ರಕರ್ತರ ಸಮಸ್ಯೆ ಪರಿಹಾರಕ್ಕೆ ಮೊದಲ ಆದ್ಯತೆ: ಕೆ ವಿ ಪ್ರಭಾಕರ್

ಸಣ್ಣ ಊರಿನ ಪತ್ರಕರ್ತರ ಸಮಸ್ಯೆ ಪರಿಹಾರಕ್ಕೆ ಮೊದಲ ಆದ್ಯತೆ ನೀಡುತ್ತೇನೆ. ಗ್ರಾಮೀಣ ಪತ್ರಕರ್ತರ ಆರೋಗ್ಯ ವಿಮೆ, ಬಸ್ ಪಾಸ್ ವಿತರಣೆಯಲ್ಲಿದ್ದ ತಾಂತ್ರಿಕ ತೊಡಕುಗಳನ್ನು ನಿವಾರಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ತಿಳಿಸಿದರು.

ಪತ್ರಿಕಾ ದಿನಾಚರಣೆಯ ಅಂಗವಾಗಿ ಮಾಲೂರು ಪತ್ರಕರ್ತರ ಭವನಕ್ಕೆ ಭೂಮಿಪೂಜೆ ನೆರವೇರಿಸಿ, ಪತ್ರಕರ್ತರಿಗೆ ಅಭಿನಂದಿಸಿ ಅವರು ಮಾತನಾಡಿದರು.

“ಪತ್ರಕರ್ತರಿಗೆ ತುಂಬಾ ಅವಶ್ಯಕವಿರುವ ಆರೋಗ್ಯ ಸಮಸ್ಯೆಗಳಿಗೆ ಕೂಡಲೇ ಪರಿಹಾರ ಸಿಗುವಂತಹ ಆರೋಗ್ಯ ವಿಮೆ ಈ ಹಿಂದೆಯೇ ಮಾಡಲಾಗಿತ್ತು. ಅದಕ್ಕಾಗಿ 10 ಕೋಟಿ ರೂ.ಗಳನ್ನು ಮೀಸಲಿಡಾಲಾಗಿದೆ” ಎಂದರು.

“ಆರೋಗ್ಯ ವಿಮೆ ನೀಡಲು ಕೆಲವು ನ್ಯೂನ್ಯತೆಗಳಿದ್ದವು. ಅವುಗಳ ಸರಳೀಕರಣಕ್ಕೆ ಇತ್ತೀಚಿಗೆ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅದಕ್ಕೊಂದು ಕರಡು ನೀತಿ ರೂಪಿಸಲಾಗಿದೆ. ಅದು ಶೀಘ್ರದಲ್ಲಿ ಎಲ್ಲ ಪತ್ರಕರ್ತರಿಗೆ ಸುಲಭವಾಗಿ ಸಿಗುವಂತಾಗಲಿದೆ” ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments