Homeಕರ್ನಾಟಕಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ಬಜೆಟ್‌ನಲ್ಲಿ ಐದು ಕ್ರಮ ಘೋಷಣೆ

ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ಬಜೆಟ್‌ನಲ್ಲಿ ಐದು ಕ್ರಮ ಘೋಷಣೆ

ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಹಾಗೂ ದಕ್ಷತೆಯನ್ನು ಹೆಚ್ಚಿಸಲು ಪ್ರಸಕ್ತ ವರ್ಷ ಐದು ಉಪ ಕ್ರಮಗಳನ್ನು ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದೆ.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಮಾಡಲು ಕ್ರಮ.

ಗ್ರಾಮ ಪಂಚಾಯಿತಿಗಳ ಸಂಪನ್ಮೂಲಗಳನ್ನು ಹೆಚ್ಚಿಸಲು ಗ್ರಾಮ ಪಂಚಾಯಿತಿ ಸ್ವತ್ತುಗಳ Asset Monetisation ನೀತಿಯನ್ನು ಜಾರಿಗೆ ತರಲಾಗುವುದು. ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಇ-ಆಫೀಸ್‌ ಅನ್ನು ಪ್ರಾರಂಭ.

ಸೇವಾ ಸಿಂಧು ಪೋರ್ಟಲ್‌ ಮೂಲಕ ಒದಗಿಸಲಾಗುತ್ತಿರುವ ಎಲ್ಲಾ ಸೇವೆಗಳನ್ನು ಈ ವರ್ಷದಿಂದ ಬಾಪೂಜಿ ಸೇವಾ ಕೇಂದ್ರಗಳಲ್ಲೂ ಆರಂಭ

ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಿಗದಿತ ಶುಲ್ಕ ಪಾವತಿಯೊಂದಿಗೆ ವ್ಯವಹಾರ ಪರವಾನಗಿಗಳ ಸ್ವಯಂಚಾಲಿತ ನವೀಕರಣಕ್ಕೆ ಕಾಯ್ದೆಯಲ್ಲಿ ಸೂಕ್ತ ತಿದ್ದುಪಡಿ ತರುವ ಭರವಸೆ

ಗ್ರಾಮ ಪಂಚಾಯಿತಿಗಳ ಸಭೆಗಳು ಮತ್ತು ಗ್ರಾಮ ಸಭೆಗಳ ಕಾರ್ಯಕಲಾಪಗಳ ನೇರ ಪ್ರಸಾರ

ವಿದ್ಯುತ್ ವೆಚ್ಚ ಕಡಿಮೆ ಮಾಡಲು ಕ್ರಮ

ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್ ಬಳಕೆಯ ಮೇಲೆ ನಿಗಾವಹಿಸಲು ಹಾಗೂ ವಿದ್ಯುತ್ ವೆಚ್ಚ ಕಡಿಮೆ ಮಾಡಲು ಪ್ರಾಯೋಗಿಕವಾಗಿ ಕೆಲವು ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಹೇಳಿದೆ.

50 ಗ್ರಾಮ ಪಂಚಾಯಿತಿಗಳಲ್ಲಿ ಹೊಂಬೆಳಕು ಕಾರ್ಯಕ್ರಮದಡಿ 25 ಕೋಟಿ ರೂ.ಗಳ ವೆಚ್ಚದಲ್ಲಿ ಸೋಲಾರ್ ದೀಪಗಳನ್ನು ಅಳವಡಿಕೆಯ ಭರವಸೆ

200 ಗ್ರಾಮ ಪಂಚಾಯಿತಿಗಳಲ್ಲಿ ಬೀದಿ ದೀಪಗಳ ವ್ಯವಸ್ಥಿತ ಮೀಟರಿಂಗ್.

ದೇಶದ ಪ್ರಪ್ರಥಮ ವರ್ತುಲ ಆರ್ಥಿಕತೆ ಸ್ಥಾಪನೆ

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಡಳಿತ ವ್ಯವಸ್ಥೆಯನ್ನು ಬಲಪಡಿಸಲು ಚುನಾಯಿತ ಸದಸ್ಯರಿಗೆ ಮತ್ತು ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ಸದಸ್ಯರಿಗೆ ತರಬೇತಿ ನೀಡಲಾಗುವುದು ಹಾಗೂ ದೇಶದ ಪ್ರಪ್ರಥಮ ವರ್ತುಲ ಆರ್ಥಿಕತೆಯ (Circular Economy) ಪ್ರಯೋಗಾಲಯವನ್ನು ಸ್ಥಾಪಿಸಲು ಎರಡು ಕೋಟಿ ರೂ.ಗಳನ್ನು ಒದಗಿಸಲು ಕ್ರಮ

ಪಂಚಾಯತ್ ರಾಜ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಹಂಚಿಕೆ ಮಾಡಬೇಕಾದ ಅನುದಾನದ ಸೂತ್ರಗಳ ಬಗ್ಗೆ ಅಧ್ಯಯನ ನಡೆಸಿ, ಸೂಕ್ತ ಶಿಫಾರಸ್ಸು ಮಾಡಲು 5ನೇ ರಾಜ್ಯ ಹಣಕಾಸು ಆಯೋಗವನ್ನು ರಚಿಸಲಾಗಿದೆ. ಆಯೋಗದಿಂದ ಸ್ವೀಕೃತವಾಗುವ ಶಿಫಾರಸ್ಸುಗಳನ್ನು ನಮ್ಮ ಸರ್ಕಾರವು ಪ್ರಾಮಾಣಿಕವಾಗಿ ಪರಿಶೀಲಿಸುತ್ತದೆ ಮತ್ತು ರಾಜ್ಯದಲ್ಲಿ ಸ್ಥಳೀಯ ಆಡಳಿತ ವ್ಯವಸ್ಥೆಯನ್ನು ಬಲಪಡಿಸುವ ಭರವಸೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments