Homeಕರ್ನಾಟಕವಿಜಯ್ ತಾತಾ ವಿರುದ್ಧ ತನಿಖೆಗೆ ಎಸ್‌ಐಟಿ ರಚಿಸಿ; ಹೆಚ್ ಎಂ ರಮೇಶ್ ಗೌಡ ಆಗ್ರಹ

ವಿಜಯ್ ತಾತಾ ವಿರುದ್ಧ ತನಿಖೆಗೆ ಎಸ್‌ಐಟಿ ರಚಿಸಿ; ಹೆಚ್ ಎಂ ರಮೇಶ್ ಗೌಡ ಆಗ್ರಹ

ವಂಚಕ ವಿಜಯ್ ತಾತಾನಿಂದ ಅನೇಕರಿಗೆ ಮೋಸವಾಗಿದ್ದು, ಮೋಸ ಹೋದವರಿಗೆ ನ್ಯಾಯ ಕೊಡಿಸಲು ವಿಶೇಷ ತನಿಖಾ ತಂಡ (ಎಸ್ ಐಟಿ) ರಚನೆ ಮಾಡಬೇಕು ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಮಾಜಿ ಶಾಸಕ ಹೆಚ್‌ ಎಂ ರಮೇಶ್ ಗೌಡ ಒತ್ತಾಯಿಸಿದರು.

ಪಕ್ಷದ ಕಚೇರಿಯಲ್ಲಿ ಸಂಸದ ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯರಾದ ಕೆ.ಎನ್.ತಿಪ್ಪೇಸ್ವಾಮಿ, ಟಿ.ಎ
ಶರವಣ, ಜವರಾಯಿಗೌಡ ಸೇರಿ ಪಕ್ಷದ ವಿವಿಧ ಮುಖಂಡರ ಜತೆ ಜಂಟಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, “ಅನೇಕರಿಗೆ ವಿಜಯ್ ತಾತಾ ಮೋಸ ಮಾಡಿದ್ದಾನೆ. ಆತನ ವಿರುದ್ಧ ನೂರಾರು ಪ್ರಕರಣಗಳು ದಾಖಲಾಗಿವೆ. ವಂಚನೆಯೇ ಆತನ ಪ್ರವೃತ್ತಿ ಆಗಿದ್ದು, ವಿಶೇಷ ತನಿಖೆ ನಡೆಯಬೇಕು” ಎಂದು ಅಗ್ರಹಿಸಿದರು.

“ಅಲ್ಲದೆ; ರಾಜ್ಯದ ಆಂತರಿಕ ಭದ್ರತಾ ವಿಭಾಗದಿಂದ ನನ್ನ ಫೋನ್ ಕದ್ದಾಲಿಕೆ ಆಗುತ್ತಿದೆ. ಪೊಲೀಸ್ ಆಯುಕ್ತರಿಗೆ ನಾನು ದೂರು ನೀಡುತ್ತೇನೆ. ಈ ಬಗ್ಗೆಯೂ ತನಿಖೆ ನಡೆಯಬೇಕು” ಎಂದು ರಮೇಶ್ ಗೌಡ ಆಗ್ರಹಿಸಿದರು.

“ಪೊಲೀಸ್ ಠಾಣೆಯಲ್ಲಿ ಸ್ವತಃ ವಿಜಯ್ ತಾತಾನೇ ನನಗೆ ಹೇಳಿದ್ದಾರೆ. ಕುಮಾರಸ್ವಾಮಿ ಮತ್ತು ನಿಮ್ಮ ಮೇಲೆ ಕೇಸು ದಾಖಲಿಸಲು ನನ್ನ ಮೇಲೆ‌ ಸಿಎಂ‌‌ ಕಚೇರಿ ಹಾಗೂ ಕೆಲ ಸಚಿವರ ಒತ್ತಡ ಇದೆ ಎಂದು ಹೇಳಿದ್ದಾನೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿನ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ಮಾಡಲಿ” ಎಂದರು.

“ವಿಜಯ್ ತಾತಾ ಮೇಲೆ ಕರ್ನಾಟಕದಲ್ಲಿ ಮಾತ್ರವಲ್ಲ,; ನಾಗಪುರ, ಪುಣೆ ಮುಂಬಯಿಯಲ್ಲೂ ಪ್ರಕರಣಗಳು ದಾಖಲಾಗಿವೆ. ಇದಕ್ಕೆ ಸಂಬಂಧಪಟ್ಟ ಎಲ್ಲಾ ದಾಖಲೆಗಳು ನನ್ನ ಬಳಿ ಇವೆ. ನೂರಾರು ಎಫ್ಐಆರ್ ಗಳು ಆಗಿವೆ. ನಾನು ಮನೆಗೆ ಹೋಗಿ ದೂರವಾಣಿ ಕರೆ ಮಾಡಿಕೊಟ್ಡಿದ್ದರೆ ಸಿಸಿ ಟಿವಿ ಇದೆಯಲ್ಲ ಅದನ್ನು ತೋರಿಸಲಿ” ಎಂದು ಸವಾಲು ಹಾಕಿದರು.

“ನಾನು ದೂರು ಕೊಟ್ಟರೆ ಎಫ್ಐಆರ್ ಆಗಲ್ಲ. ಆತ ದೂರು ಕೊಟ್ಟರೆ ಆಗುತ್ತದೆ. ಪೊಲೀಸ್ ಠಾಣೆ ಮುಂದೆ ಧರಣಿ ಕೂರುತ್ತೇನೆ. ನಾಳೆಯಿಂದ ಎಲ್ಲಾ ಸಚಿವರ ಮೇಲೆ ದೂರು ಕೊಟ್ಟರೆ ಎಫ್ಐಆರ್ ಸಚಿವರುಗಳ ಹಾಕುತ್ತಾರಾ? ಧರ್ಮಸ್ಥಳದ ಮಂಜುನಾಥ ಸ್ವಾಮಿ, ತಾಯಿ ಚಾಮುಂಡೇಶ್ವರಿ ಮೇಲೆ ಪ್ರಮಾಣ ಮಾಡುತ್ತೇನೆ. ನಾನು ವಿಜಯ್ ತಾತಾ ಬಳಿ ಯಾವುದೇ ಹಣ ಕೇಳಿಲ್ಲ” ಎಂದು ಹೇಳಿದರು.

ಪೊಲೀಸ್ ಆಯುಕ್ತರ ಕಚೇರಿ ಎದುರು ಧರಣಿ

ವಿಜಯ್ ತಾತಾ ವಿರುದ್ಧ ನಾನು ದೂರು ಕೊಟ್ಟಿದ್ದರೂ ಎಫ್ಐಆರ್ ಮಾಡದಿರುವ ಪೊಲೀಸರ ಕ್ರಮ ಖಂಡಿಸಿ ರಮೇಶ್ ಗೌಡ ಮತ್ತಿತರೆ ಮುಖಂಡರು ನಗರ ಪೊಲೀಸ್ ಆಯುಕ್ತರ ಕಚೇರಿ ಎದುರು ಧರಣಿ ನಡೆಸಿದರು. ಪೊಲೀಸ್ ಇಲಾಖೆ ಸಹಜ ನ್ಯಾಯ ಪಾಲನೆ ಮಾಡುತ್ತಿಲ್ಲ. ಒತ್ತಡಕ್ಕೆ ಮಣಿದು ಕೆಲಸ ಮಾಡುತ್ತಿದೆ ಎಂದು ಅವರು ಆರೋಪ ಮಾಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments