Homeಕರ್ನಾಟಕಕೋವಿಡ್‌ ನಿಯಂತ್ರಣ | ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚನೆ

ಕೋವಿಡ್‌ ನಿಯಂತ್ರಣ | ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚನೆ

ರಾಜ್ಯದಲ್ಲಿ ಕೋವಿಡ್​ ನಿಯಂತ್ರಣ ಮತ್ತು ಅದರ ಕುರಿತು ಪರಾಮರ್ಶೆ ನಡೆಸಲು ರಾಜ್ಯ ಸರ್ಕಾರ ಸಂಪುಟ ಉಪ ಸಮಿತಿ ರಚಿಸಿದೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಮೂರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿ ರಚಿಸಲಾಗಿದೆ. ಸಚಿವರಾದ ಹೆಚ್ ಸಿ ಮಹದೇವಪ್ಪ, ಶರಣ ಪ್ರಕಾಶ್ ಪಾಟೀಲ್ ಹಾಗೂ ಎಂ ಸಿ ಸುಧಾಕರ್ ಅವರನ್ನು ಉಪಸಮಿತಿ ಸದಸ್ಯರನ್ನಾಗಿ ನೇಮಕ ಮಾಡಿದೆ.

ಈ ಸಮಿತಿಯು ಕೊವಿಡ್ ಸೇರಿ ಸಾಂಕ್ರಾಮಿಕ ರೋಗಗಳ ಕುರಿತು ಪರಾಮರ್ಶಿಸಲಿದೆ. ರಾಜ್ಯದಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ(ಡಿಸೆಂಬರ್ 21) ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಭೆ ಮಾಡಿದ್ದರು.

ಈ ಸಭೆಯಲ್ಲಿ ಅಧಿಕಾರಿಗಳಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದರು. ಅಲ್ಲದೇ ಕೋವಿಡ್ ನಿರ್ವಹಣೆಗೆಂದು ಒಂದು ಸಂಪುಟ ಉಪಸಮಿತಿ ರಚಿಸುವುದಾಗಿ ಹೇಳಿದ್ದರು. ಈ ಬಗ್ಗೆ ನಿನ್ನೆ ನಡೆದ ಸಚಿವ ಸಂಪುಟದಲ್ಲೂ ಸಮಿತಿ ರಚನೆಗೆ ತೀರ್ಮಾನಿಸಲಾಗಿತ್ತು. ಅದರಂತೆ ಇದೀಗ ರಾಜ್ಯ ಸರ್ಕಾರ ಅಧಿಕೃತವಾಗಿ ಸಂಪುಟ ಉಪಸಮಿತಿ ರಚನೆ ಮಾಡಿ ಆದೇಶ ಹೊರಡಿಸಿದೆ. ಇನ್ನು ಈ ಸಮಿತಿ ಔಷಧ ಖರೀದಿ, ಮಾಸ್ಕ್​ ಕಡ್ಡಾಯ ಸೇರಿದಂತೆ ಎಲ್ಲ ವಿಷಯ ನಿರ್ಧರಿಸಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments