Homeಕರ್ನಾಟಕರಾಜ್ಯ, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆ

ರಾಜ್ಯ, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆ

ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ಮಾತನಾಡಿದರು.

“ವಿಧಾನಸಭೆಯಲ್ಲಿಯೂ ಒಂದು ಸಮಿತಿ ಇರಲಿದ್ದು, ರಾಜ್ಯಮಟ್ಟದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು. ಸುಮಾರು 31 ಜನ ಸದಸ್ಯರು ಇರಲಿದ್ದು ಇವರೆಲ್ಲರೂ ಕಾರ್ಯಕರ್ತರು. 31 ಜಿಲ್ಲಾ ಮಟ್ಟದಲ್ಲಿ ಒಬ್ಬ ಅಧ್ಯಕ್ಷರು ಹಾಗೂ ಉಪಾಧ್ಯಕ್ಷ ರು ಹಾಗೂ ಸದಸ್ಯರು ಇರಲಿದ್ದಾರೆ. ಅವರಿಗೆ ಕಚೇರಿ ವ್ಯವಸ್ಥೆ ಹಾಗೂ ಗೌರವ ಧನ ನೀಡುವ ವ್ಯವಸ್ಥೆ ಆಗಲಿದೆ. ಹಾಗೆಯೇ 50 ಸಾವಿರ ರೂ.ಗಳನ್ನು ಪ್ರತಿ ತಿಂಗಳು ನೀಡಲಾಗುವುದು. 21 ಸದಸ್ಯರು ಇರಲಿದ್ದು, 224 ಕ್ಷೇತ್ರಗಳಲ್ಲಿ ಅಧ್ಯಕ್ಷರು ಹಾಗೂ 11 ಸದಸ್ಯರು ಇರಲಿದ್ದಾರೆ ಇವರಿಗೆ ಗೌರವ ಧನ ಹಾಗೂ ಸಿಟ್ಟಿಂಗ್ ಫೀಸ್ ಸಹ ಒದಗಿಸಲಾಗುವುದು. ಈ ಮೊತ್ತವನ್ನು ರಾಜ್ಯ ಖಜಾನೆಯಿಂದ ಭರಿಸಲಾಗುವುದು” ಎಂದು ವಿವರಿಸಿದರು.

“ಸರ್ಕಾರಕ್ಕೆ ಇದು ದೊಡ್ಡ ಹೊರೆಯೇನಲ್ಲ. ಪರಿಣಾಮಕಾರಿಯಾಗಿ ಗ್ಯಾರಂಟಿಗಳ ಅನುಷ್ಠಾನವಾಗಬೇಕು ಎಂಬ ಕಾರಣಕ್ಕೆ 16 ಕೋಟಿ ರೂ.ಗಳನ್ನು ಭರಿಸುತ್ತೇವೆ. ಅಪಪ್ರಚಾರಕ್ಕೆ ಉತ್ತರ ಕೊಡಲು ಈ ಸಮಿತಿಗಳನ್ನು ರಚಿಸಲಾಗುತ್ತಿದೆ” ಎಂದರು.

“ಕಾರ್ಯಕರ್ತರಿಗೆ, ಶಾಸಕರಲ್ಲದವರಿದೆ, ಸಂಸದರಲ್ಲದವರಿಗೆ, ಸಮಿತಿ ಸದಸ್ಯತ್ವ ದೊರೆಯಲಿದೆ. ವಿವಿಧ ಇಲಾಖೆಗಳ ಸಮಿತಿಗಳನ್ನು ಕೂಡಲೇ ರಚಿಸಲು ಆಯಾ ಇಲಾಖೆಗಳ ಸಚಿವರ ವಿವೇಚನೆಗೆ ಬಿಡಲಾಗಿದೆ. ಹೆಸರುಗಳನ್ನು ಪಡೆಯುವಾಗ, ನಮ್ಮ ಶಾಸಕರು, ಸಂಸದರ ಸಲಹೆ ಪಡೆಯುವಂತೆ ಸೂಚಿಸಿದರು. ಕೆಲವು ಶಾಸಕರಿಗೆ , ವಿಧಾನಸಭೆ ಟಿಕೆಟ್ ದೊರೆಯದವರಿಗೆ ಅವಕಾಶ ಕಲ್ಪಿಸಲಾಗುವುದು. ಎರಡು ವರ್ಷಗಳ ಅವಧಿ ಇರಲಿದೆ . ಕಾರ್ಯಕರ್ತರ ಶ್ರಮದಿಂದ ಪಕ್ಷ ಗಟ್ಟಿಯಾಗಿದೆ” ಎಂದರು.

ಸಕಾರಾತ್ಮಕವಾಗಿರಿ: ಸಿಎಂ ಕಿವಿಮಾತು

“ಚುನಾವಣೆಯನ್ನು ನಾವು ಗೆಲ್ಲಲೇಬೇಕು. ಇಷ್ಟೆಲ್ಲಾ ಮಾಡಿಯೂ ನಾವು ಗೆಲ್ಲದೆ ಹೋದರೆ ಅದು ನಮಗೆ ಹಿನ್ನಡೆಯಾಗಲಿದೆ. 28ಕ್ಕೆ 28 ಸೀಟನ್ನು ಗೆಲ್ಲಬೇಕು. ಕನಿಷ್ಠ 26 ಸೀಟು ಗೆಲ್ಲಬೇಕು. ಜನರ ನಾಡಿ ಮಿಡಿತ ನಮ್ಮ ಪರವಾಗಿರುವುದರಿಂದ ಅಪಪ್ರಚಾರದಿಂದ ನಾವು ಯಾರೂ ಹತಾಶರಾಗಬಾರದು. ಕಾರಾತ್ಮಕವಾಗಿರಬೇಕು” ಎಂದು ಸಿಎಂ ಕಿವಿಮಾತು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments