Homeಕರ್ನಾಟಕಎಚ್‌ ಡಿ ಕುಮಾರಸ್ವಾಮಿ ಸರಿಯಾಗಿ ಸ್ಪಂದಿಸುತ್ತಿಲ್ಲ: ಬಿಜೆಪಿ ಮಾಜಿ ಸಚಿವ ಕೆ.ಸಿ.ನಾರಾಯಣ ಬೇಸರ

ಎಚ್‌ ಡಿ ಕುಮಾರಸ್ವಾಮಿ ಸರಿಯಾಗಿ ಸ್ಪಂದಿಸುತ್ತಿಲ್ಲ: ಬಿಜೆಪಿ ಮಾಜಿ ಸಚಿವ ಕೆ.ಸಿ.ನಾರಾಯಣ ಬೇಸರ

ನಾವು ಮುಕ್ತಮನಸ್ಸಿನಿಂದ ರಾಜಕೀಯ ಶಕ್ತಿಯನ್ನು ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಧಾರೆ ಎರೆದು ಗೆಲ್ಲಿಸಿಕೊಂಡು ಬಂದಿದ್ದೇವೆ. ಆದರೆ ಅದನ್ನು ಮರೆತು ನಮ್ಮ ಕಾರ್ಯಕರ್ತರಿಗೆ ಜೆಡಿಎಸ್‌ನವರು ಕಾಟ ಕೊಡುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಸಿ.ನಾರಾಯಣ ಗೌಡ ಆರೋಪಿಸಿದ್ದಾರೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು, “ಲೋಕಸಭಾ ಚುನಾವಣೆಯಲ್ಲಿ ವರಿಷ್ಠರ ಮನವಿಗೆ ಒಟ್ಟಾಗಿ ಇದ್ದೆವು. ನಮಗೆ ನೋವು ಇತ್ತು. ಶಕ್ತಿ ತುಂಬಿ ಚುನಾವಣೆ ಮಾಡಿದ್ದೆವು. ಕುಮಾರಸ್ವಾಮಿ ಸ್ಪಂದಿಸುವ ಕೆಲಸವನ್ನು ಮಾಡುತ್ತಿಲ್ಲ” ಎಂದು ದೂರಿದರು.

“ನಾವೇ ಒಂದು ತಂಡ ಕಟ್ಟಿಕೊಂಡು ರಾಷ್ಟ್ರೀಯ ನಾಯಕರನ್ನು ಶೀಘ್ರದಲ್ಲಿ ಭೇಟಿ ಮಾಡುತ್ತೇವೆ. ಜೆಡಿಎಸ್ ಕಾರ್ಯಕರ್ತರ ಕಿತಾಪತಿ ನಿಲ್ಲಿಸಬೇಕು. ಕೆ.ಆರ್‌. ಪೇಟೆಯಲ್ಲಿ ನಾನು ತಂದ ಅನುದಾನಕ್ಕೆ ಪೂಜೆ ಮಾಡುತ್ತಿದ್ದಾರೆ. ಈಗಿರುವ ಶಾಸಕರ ಹತ್ತಿರ ನಮ್ಮ ಕಾರ್ಯಕರ್ತರನ್ನು ಕಳುಹಿಸಿದರೆ ಶಾಲು ಹಾರ ಹಾಕಿ ಪಾರ್ಟಿಗೆ ಸೇರಿಸಿಕೊಳ್ಳುತ್ತಾರೆ. ನಾನು ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ ಘೋಷಣೆ ಮಾಡೋದನ್ನು ನಿಲ್ಲಿಸಬೇಕು” ಎಂದು ಕಟುವಾಗಿ ನುಡಿದರು.

“ನಮ್ಮ ಪಕ್ಷದ ಗೌರವಕ್ಕಾಗಿ ಬಾಯಿ ಮುಚ್ಚಿಕೊಂಡು ಇದ್ದೇವೆ. ಇಲ್ಲ ಬೇರೆ ರೀತಿ ಬ್ಲಾಸ್ಟ್ ಮಾಡುತ್ತಿದ್ದೆ. ನಿಮ್ಮ ತಂದೆ ಗೆಲುವಿಗೆ ಎಷ್ಟು ಕಷ್ಟ ಪಟ್ಟಿದ್ದೀವಿ ಎನ್ನುವುದನ್ನು ನಿಖಿಲ್ ಅವರು ಅರ್ಥ ಮಾಡಿಕೊಳ್ಳಬೇಕು” ಎಂದು ಹರಿಹಾಯ್ದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಮಾತನಾಡಿ, “ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ವಿಚಾರ ಇರಬೇಕೋ ಬೇಡವೋ ಎನ್ನುವುದನ್ನು ರಾಷ್ಟ್ರ ನಾಯಕರು ತೀರ್ಮಾನ ಮಾಡುತ್ತಾರೆ. ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್‌ನಷ್ಟೇ ಬಿಜೆಪಿಯೂ ಬಲಿಷ್ಠವಾಗಿದೆ. ನಮ್ಮ ಕಾರ್ಯಕರ್ತರಿಗೆ ಶಕ್ತಿ ತುಂಬಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರೋಣ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments