ವಿಧಾನ ಪರಿಷತ್ ಟಿಕೆಟ್ ನೀಡದ ಕಾರಣಕ್ಕಾಗಿ ಬಿಜೆಪಿಯೊಳಗೆ ಬಂಡಾಯ ಎದ್ದು, ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ಕೆ ರಘುಪತಿ ಭಟ್ ಅವರನ್ನು ಬಿಜೆಪಿ ಆರು ವರ್ಷಗಳ ಕಾಲ ಉಚ್ಚಾಟಿಸಿದೆ.
ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರು ಉಚ್ಚಾಟನಾ ಆದೇಶ ಹೊರಡಿಸಿ, “ಪಕ್ಷದ ಸೂಚನೆಯನ್ನು ಕಡೆಗಣಿಸಿ ವಿಧಾನ ಪರಿಷತ್ ಚುನಾವಣೆಗೆ ನೈರುತ್ಯ ಪದವೀಧರ ಕ್ಷೇತ್ರದಿಂದ ನಮ್ಮ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧವೇ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷಕ್ಕೆ ಮುಜುಗರ ತಂದಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ತಮ್ಮನ್ನು ತಕ್ಷಣದಿಂದಲೇ ಪಕ್ಷದ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ, ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ” ಎಂದು ತಿಳಿಸಿದ್ದಾರೆ.
ಉಡುಪಿ ಬಿಜೆಪಿಯ ಮಾಜಿ ಶಾಸಕ ರಘುಪತಿ ಭಟ್‌ಗೆ ಬಿಜೆಪಿ ರಾಜ್ಯ ಶಿಸ್ತು ಸಮಿತಿ ನೋಟಿಸ್ ಎರಡು ದಿನದ ಹಿಂದೆಯೇ ನೋಟಿಸ್ ನೀಡಿ, 2 ದಿನದೊಳಗಾಗಿ ಸ್ಪಷ್ಟೀಕರಣ ನೀಡುವಂತೆ ಸೂಚನೆ ನೀಡಿತ್ತು.
