Homeಕರ್ನಾಟಕಮಾಜಿ ಸಚಿವ ಶಿವಾನಂದ ಕೌಜಲಗಿ ನಿಧನ: ಗಣ್ಯರ ಸಂತಾಪ

ಮಾಜಿ ಸಚಿವ ಶಿವಾನಂದ ಕೌಜಲಗಿ ನಿಧನ: ಗಣ್ಯರ ಸಂತಾಪ

ಕರ್ನಾಟಕ ಸರ್ಕಾರದ ಮಾಜಿ ಲೋಕೋಪಯೋಗಿ ಸಚಿವರು, ಬೈಲಹೊಂಗಲ ನಾಡಿನ ಹಿರಿಯ ರಾಜಕಾರಣಿ ಹಾಗೂ ಪ್ರತಿಷ್ಠಿತ ಕೆಎಲ್‌ಇ ಸಂಸ್ಥೆಯ ಅಧ್ಯಕ್ಷರಾಗಿದ್ದ ಶ್ರೀ ಶಿವಾನಂದ ಕೌಜಲಗಿ ಅವರ ನಿಧನದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ.

ಶಿಕ್ಷಣ, ಸಹಕಾರ ಮತ್ತು ಸಮಾಜ ಸೇವೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ ಅವರು ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ಹಾಗೂ ಕೆಎಲ್‌ಇ ಸಂಸ್ಥೆಯ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ ಸ್ಮರಣೀಯ. ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು ಜನಪರ ಕಾಳಜಿ ಮತ್ತು ಸಾಮಾಜಿಕ ಬದ್ಧತೆಗೆ ಹೆಸರಾಗಿದ್ದರು.

ಅವರ ನಿಧನದಿಂದ ನಾಡು ಒಬ್ಬ ಹಿರಿಯ ರಾಜಕೀಯ ಮುತ್ಸದ್ದಿ ಹಾಗೂ ಸಮಾಜಮುಖಿ ನಾಯಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.

ಭಗವಂತನು ಅವರ ದಿವ್ಯಾತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬದವರು, ಅಭಿಮಾನಿಗಳು ಹಾಗೂ ಹಿತೈಷಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಾರ್ಥಿಸಿದ್ದಾರೆ.

ಮಾಜಿ ಸಚಿವರು, ಮಾಜಿ ಸಂಸದರು ಹಾಗೂ ಕೆ.ಎಲ್.ಇ ಶಿಕ್ಷಣ ಸಂಸ್ಥೆಗಳ ಮಾಜಿ ಅಧ್ಯಕ್ಷರೂ ಆದ ಶಿವಾನಂದ ಕೌಜಲಗಿ ಅವರ ನಿಧನಕ್ಕೆ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments