Homeಕರ್ನಾಟಕಉತ್ತರ ಕರ್ನಾಟಕ ಸಮಸ್ಯೆ ಚರ್ಚಿಸಲು ನಾಲ್ಕು ದಿನ ಮೀಸಲು: ಸಭಾಪತಿ ಬಸವರಾಜ ಹೊರಟ್ಟಿ

ಉತ್ತರ ಕರ್ನಾಟಕ ಸಮಸ್ಯೆ ಚರ್ಚಿಸಲು ನಾಲ್ಕು ದಿನ ಮೀಸಲು: ಸಭಾಪತಿ ಬಸವರಾಜ ಹೊರಟ್ಟಿ

ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಲು ಚಳಿಗಾಲ ಅಧಿವೇಶನದಲ್ಲಿ ನಾಲ್ಕು ದಿನ ಮೀಸಲಿಡಲಾಗಿದೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಡಿ. 10 ಮತ್ತು 11 ಹಾಗೂ ಡಿ. 17 ಮತ್ತು 18ರಂದು ಕೃಷ್ಣಾ ಮೇಲ್ದಂಡೆ, ಮಹದಾಯಿ-ಕಳಸಾ-ಬಂಡೂರಿ, ತುಂಗ ಭದ್ರಾ, ಕಾರಂಜಾ, ಕೃಷಿ, ಅರಣ್ಯಭೂಮಿ ಅತಿಕ್ರಮಣದಾರರು ಮತ್ತು ಸಂತ್ರಸ್ತರ ಸಮಸ್ಯೆ, ಸಕ್ಕರೆ ಕಾರ್ಖಾನೆ, ತೋಟಗಾರಿಕೆ ಸೇರಿದಂತೆ ಹಲವು ವಿಷಯಗಳ ಕುರಿತು ವಿಸ್ತ್ರತ ಚರ್ಚೆ ನಡೆಯಲಿದೆ” ಎಂದು ಹೇಳಿದರು.

“ಈ ಬಾರಿಯ ಅಧಿವೇಶನದ ಕಲಾಪಗಳು ಉತ್ತಮ ರೀತಿಯಲ್ಲಿ ನಡೆಯಬೇಕು. ಯಾವೆಲ್ಲ ವಿಷಯಗಳ ಕುರಿತು ಚರ್ಚೆ ನಡೆಯಲಿದೆ ಎಂದು ವಿಷಯಪಟ್ಟಿ ಸಿದ್ಧಪಡಿಸಲಾಗಿದೆ. ಶೂನ್ಯವೇಳೆ (ಮಧ್ಯಾಹ್ನ 3.30) ನಂತರ ಈ ವಿಷಯಗಳ ಕುರಿತು ಚರ್ಚೆ ನಡೆಯಲಿದ್ದು, ರಾತ್ರಿ 10 ಗಂಟೆಯಾದರೂ ಎಲ್ಲರೂ ಪಾಲ್ಗೊಳ್ಳಬೇಕು ಎಂದು ತಿಳಿಸಿದ್ದೇನೆ. ಈ ಕುರಿತು ವಿರೋಧಪಕ್ಷದ ನಾಯಕರ ಜೊತೆ ಮಾತನಾಡಿದ್ದೇನೆ. ಮಂಗಳವಾರ ಸರ್ವಪಕ್ಷಗಳ ಮುಖಂಡರ ಸಭೆ ಕರೆದಿದ್ದು, ಅಲ್ಲಿಯೂ ತಿಳಿಸುತ್ತೇನೆ” ಎಂದರು.

“ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಜನಪ್ರತಿನಿಧಿಗಳ ಕರ್ತವ್ಯ. ಅವುಗಳನ್ನು ಅಧಿವೇಶನದಲ್ಲಿ ಕೂಲಂಕಶವಾಗಿ ಚರ್ಚಿಸಿ ಪ್ರಜಾಪ್ರಭುತ್ವದ ಆಶಯಕ್ಕೆ ತಕ್ಕ ಹಾಗೆ ನಡೆದುಕೊಳ್ಳಬೇಕು. ಕೆಲವು ಶಾಸಕರು ಸಹಿ ಮಾಡಿ ಹಾಗೆಯೇ ಹೋಗುತ್ತಾರೆ. ಅಧಿವೇಶನದಲ್ಲಿ ಪಾಲ್ಗೊಂಡು ಪ್ರಶ್ನೆ ಕೇಳುವಂತೆ ಜನಪ್ರತಿನಿಧಿಗಳಿಗೆ ಮನವರಿಕೆ ಮಾಡುತ್ತಿದ್ದೇವೆ. ಈ ಬಾರಿ ಶೇ 70ರಷ್ಟು ಶಾಸಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments