Homeದೇಶದೇಶದಲ್ಲಿ ಮತ್ತೆ ಇಂಧನ ದರ ಏರಿಕೆ, ಎರಡು ವಾರದೊಳಗೆ 7.5 ರೂ. ಹೆಚ್ಚಳ

ದೇಶದಲ್ಲಿ ಮತ್ತೆ ಇಂಧನ ದರ ಏರಿಕೆ, ಎರಡು ವಾರದೊಳಗೆ 7.5 ರೂ. ಹೆಚ್ಚಳ

ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‌ಗೆ ರೂ.2.61 ಹಾಗೂ ಡೀಸೆಲ್ ದರವನ್ನು ರೂ.2.71 ಹೆಚ್ಚಿಸಲಾಗಿದ್ದು, ಕಳೆದ ಎರಡು ವಾರಗಳಲ್ಲಿ ಇದು ನಾಲ್ಕನೇ ಬಾರಿ ನಡೆದ ದರ ಏರಿಕೆಯಾಗಿದೆ.

ಅಂತರರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ತೈಲೋತ್ಪನ್ನಗಳ ಮಾರಾಟ ಕಂಪನಿಗಳು ಮೇ 15ರಿಂದ ಇಂಧನ ಬೆಲೆಯನ್ನು ಹೆಚ್ಚಿಸುತ್ತಿವೆ. ಇದಕ್ಕೂ ಮೊದಲು ಸರಿಸುಮಾರು ನಾಲ್ಕು ವರ್ಷ ಇಂಧನ ಬೆಲೆ ಏರಿಕೆಯಾಗಿರಲಿಲ್ಲ.

ಮೇ 15ರಿಂದ ಆರಂಭವಾದ ಈ ಸರಣಿ ಏರಿಕೆಯಿಂದ ಒಟ್ಟಾರೆ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಸುಮಾರು ರೂ.7.5ರಷ್ಟು ಹೆಚ್ಚಳವಾಗಿರುವುದು ಸಾಮಾನ್ಯ ಜನರಲ್ಲಿ ಆತಂಕ ಮೂಡಿಸಿದೆ. ಇಂಧನ ದರ ಏರಿಕೆಯಿಂದ ಸಾರಿಗೆ ವೆಚ್ಚ, ಆಹಾರ ವಸ್ತುಗಳ ಬೆಲೆ, ಕೈಗಾರಿಕಾ ಉತ್ಪಾದನಾ ವೆಚ್ಚ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಬೆಲೆ ಏರಿಕೆಯ ಭೀತಿ ಎದುರಾಗಿದೆ.

ಪಶ್ಚಿಮ ಏಷ್ಯಾದ ಭೌಗೋಳಿಕ ರಾಜಕೀಯ ಉದ್ವಿಗ್ನತೆ ಮತ್ತು ಜಾಗತಿಕ ಕಚ್ಚಾ ತೈಲ ದರ ಏರಿಕೆ ಹಾಗೂ ತೈಲ ಕಂಪನಿಗಳ ನಷ್ಟವೇ ಇಂಧನ ದರ ಏರಿಕೆಗೆ ಪ್ರಮುಖ ಕಾರಣ ಎಂದು ಸರ್ಕಾರಿ ಸ್ವಾಮ್ಯದ ಆಯಿಲ್​​ ಆ್ಯಂಡ್​​ ನ್ಯಾಚುರಲ್​​ ಗ್ಯಾಸ್​​ ಕಾರ್ಪೊರೇಷನ್​​ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೆಷನ್​​ ಲಿಮಿಟೆಡ್​​ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಹಾರ್ಮುಜ್ ಜಲಸಂಧಿಯಲ್ಲಿ ಹಲವು ತಿಂಗಳಿಂದ ಇಂಧನ ತುಂಬಿದ ಹಡಗುಗಳು ಇದ್ದಲ್ಲೇ ಇವೆ. ಇದರಿಂದ ಜಾಗತಿಕ ಇಂಧನ ಸಾಗಣೆ ವ್ಯವಸ್ಥೆಯ ಮೇಲೆ ಒತ್ತಡ ಹೆಚ್ಚಿದ್ದು, ತೈಲ ಮತ್ತು ಅನಿಲ ಆಮದು ಮಾಡಿಕೊಳ್ಳುವ ದೇಶಗಳ ಆರ್ಥಿಕತೆಯ ಮೇಲೂ ಪರಿಣಾಮ ಬೀರಿದೆ. ಮಧ್ಯ ಪ್ರಾಚ್ಯ ಬಿಕ್ಕಟ್ಟಿನ ಅವಧಿಯಲ್ಲಿ ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ 65-70 ಡಾಲರ್‌ನಿಂದ 110-115 ಡಾಲರ್‌ಗೆ ಏರಿಕೆಯಾಗಿದೆ.

ಹೊಸ ದರ ಪರಿಷ್ಕರಣೆಯ ನಂತರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ ರೂ.102.12ಕ್ಕೆ ಏರಿಕೆಯಾದರೆ, ಡೀಸೆಲ್ ರೂ.95.20ಕ್ಕೆ ತಲುಪಿದೆ. ಮುಂಬೈನಲ್ಲಿ ಪೆಟ್ರೋಲ್ ರೂ.111.21 ಹಾಗೂ ಡೀಸೆಲ್ ರೂ.97.83 ಆಗಿದೆ.

ಕೊಲ್ಕತ್ತಾದಲ್ಲಿ ಪೆಟ್ರೋಲ್ ರೂ.113.51 ಮತ್ತು ಡೀಸೆಲ್ ರೂ.99.82 ದರಕ್ಕೆ ಮಾರಾಟವಾಗುತ್ತಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ ರೂ.108.09 ಹಾಗೂ ಡೀಸೆಲ್ ರೂ.108.09 ಏರಿಕೆಯಾಗಿದೆ. ಇದೇ ರೀತಿ ಚೆನ್ನೈನಲ್ಲಿ ಪೆಟ್ರೋಲ್ ರೂ, 107.77 ಹಾಗೂ ಡೀಸೆಲ್ ರೂ.99.55ಕ್ಕೆ ಏರಿಕೆಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments