ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (KRPP)ಶಾಸಕ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಕೆಲಹೊತ್ತು ಮಾತುಕತೆ ನಡೆಸಿದರು.
ಮಾಜಿ ಸಚಿವರಾದ ಶಾಸಕ ಜನಾರ್ಧನ ರೆಡ್ಡಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಶಿವರಾಜ್ ತಂಗಡಗಿ ಉಪಸ್ಥಿತರಿದ್ದರು.
ಸಚಿವ ಶಿವರಾಜ್ ತಂಗಡಗಿ ಅವರೊಂದಿಗೆ ಗಾಲಿ ಜನಾರ್ದನ ರೆಡ್ಡಿಯವರ ಹೋಗಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.
ಫೆ.27ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ -ಬಿಜೆಪಿ ಮೈತ್ರಿ ಕೂಟಕ್ಕೆ ತಿರುಗೇಟು ನೀಡಲು ಕಾಂಗ್ರೆಸ್ ರಣತಂತ್ರ ರೂಪಿಸುತ್ತಿದ್ದು, ಜನಾರ್ದನ ರೆಡ್ಡಿ ಅವರು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸುತ್ತಾರಾ ಎಂಬುದು ಕಾದುನೋಡಬೇಕು.