Homeಕರ್ನಾಟಕಮರಳಿ ಗೂಡು ಸೇರಿದ ಗಾಲಿ ಜನಾರ್ದನ ರೆಡ್ಡಿ; ಬಿಜೆಪಿ ಜೊತೆ ಕೆಆರ್‌ಪಿಪಿ ವಿಲೀನ

ಮರಳಿ ಗೂಡು ಸೇರಿದ ಗಾಲಿ ಜನಾರ್ದನ ರೆಡ್ಡಿ; ಬಿಜೆಪಿ ಜೊತೆ ಕೆಆರ್‌ಪಿಪಿ ವಿಲೀನ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ನಾಯಕ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ಬಿಜೆಪಿ ಸೇರಿದ್ದಾರೆ.

ಲೋಕಸಭಾ ಚುನಾವಣೆ ಹೊತ್ತಲ್ಲೇ ಅವರು ಮರಳಿ ಗೂಡು ಸೇರಿರುವುದು ಬಳ್ಳಾರಿ ಕ್ಷೇತ್ರದಲ್ಲಿ ಬಲ ಬಂದಂತಾಗಿದೆ.

ಸೋಮವಾರ ಬಿ ಎಸ್ ​ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ ಶ್ರೀರಾಮುಲು ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಪಕ್ಷದ ಬಾವುಟ ನೀಡಿ ಜನಾರ್ದನ ರೆಡ್ಡಿ ಅವರನ್ನು ವಿಜಯೇಂದ್ರ ಪಕ್ಷಕ್ಕೆ ಸ್ವಾಗತಿಸಿದರು.

“ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ನೋಡಲು ಬಯಸುತ್ತೇನೆ. ಕೆಆರ್‌ಪಿಪಿ ಪಕ್ಷವನ್ನೂ ಬಿಜೆಪಿ ಜೊತೆ ವಿಲೀನಗೊಳಿಸಲಾಗಿದೆ” ಎಂದು ಜನಾರ್ದನ ರೆಡ್ಡಿ ತಿಳಿಸಿದ್ದಾರೆ.

ಇತ್ತೀಚೆಗೆ ದೆಹಲಿಗೆ ದೌಡಾಯಿಸಿ, ಗೃಹ ಸಚಿವ ಅಮಿತ್ ಶಾ ಜೊತೆ ರೆಡ್ಡಿ ಒಂದು ಸುತ್ತಿನ ಮಾತುಕತೆ ನಡೆಸಿದ್ದರು. ಈ ವೇಳೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ ಎನ್ನಲಾಗಿದೆ. ಬಿಜೆಪಿಯಲ್ಲಿ ವಿಲೀನವಾಗಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ ಜನಾರ್ದನ ರೆಡ್ಡಿ, ಕೊಪ್ಪಳ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನ ಬದಲಾಯಿಸುವಂತೆ, ಅದೇ ಕ್ಷೇತ್ರದಿಂದ ಪತ್ನಿ ಅರುಣಾ ಲಕ್ಷ್ಮೀಗೆ ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments