ಮೇಕೆದಾಟು ಯೋಜನೆ ವಿಚಾರವಾಗಿ ಕಾಂಗ್ರೆಸ್ ಸರ್ಕಾರ ತನ್ನ ಸ್ಪಷ್ಟ ನಿಲುವನ್ನು ತಿಳಿಸಬೇಕು. ನಮ್ಮ ನಿಲುವು ಸ್ಪಷ್ಟವಿದೆ. ನಾವು ರಾಜ್ಯದ ಹಿತಾಸಕ್ತಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಶನಿವಾರ ಬಿಜೆಪಿ ಮಾಧ್ಯಮ ಕೇಂದ್ರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
“ರಾಜ್ಯದಲ್ಲಿ ಸಚಿವರನ್ನೇ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿತ್ತು. ಆದರೆ, ಅವರಿಗೂ ಸತ್ಯಾಂಶ ಗೊತ್ತಾಗಿದೆ. ಹೀಗಾಗಿ ಸೋಲುವ ಭಯದಿಂದ ಮಕ್ಕಳನ್ನು ನಿಲ್ಲಿಸಿದ್ದಾರೆ. ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ಸೇರಿ ನಮ್ಮ ಮೈತ್ರಿ ಅಭ್ಯರ್ಥಿಗಳು ಗೆಲ್ಲುವುದರಲ್ಲಿ ಅನುಮಾನವಿಲ್ಲ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಮನ ತಿಳಿಯಾಗಲಿದೆ. 28 ಕ್ಷೇತ್ರದಲ್ಲಿ ಮೋದಿ ಪರವಾದ ಅಲೆ ಇದೆ. ಕರ್ನಾಟಕದಲ್ಲಿ ಬಿಜೆಪಿ ಸುಭದ್ರವಾಗಿದೆ. ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಇದೆ. ಮಾಧ್ಯಮರಂಗಕ್ಕೂ ಅಷ್ಟೇ ಪ್ರಾಮುಖ್ಯತೆ ಇದೆ. ಬಿಜೆಪಿಯಿಂದ ಮೀಡಿಯಾ ಸೆಂಟರ್ ತೆರೆಯಲಾಗಿದೆ. ಇಲ್ಲಿಯೇ ಎಲ್ಲ ಸುದ್ದಿಗೋಷ್ಠಿ ನಡೆಯಲಿವೆ” ಎಂದರು.
“ವಿಪಕ್ಷಗಳ ಇಂಡಿಯಾ ಒಕ್ಕೂಟದ ಜೊತೆಗೆ ಶಸ್ತ್ರಸಜ್ಜಿತರಾಗಿದ್ದ ನಿತೀಶ್ ಕುಮಾರ್ ಅಲ್ಲಿ ಶಸ್ತ್ರತ್ಯಾಗ ಮಾಡಿ ನಮ್ಮ ಜೊತೆ ಬಂದಿದ್ದಾರೆ. ‘ಇಂಡಿಯಾ’ ಒಕ್ಕೂಟವು ನಾಯಕತ್ವ ಇಲ್ಲದೆ, ದಿಕ್ಕು ಕಾಣದಂತಿದೆ. ಮ್ಯಾಚ್, ಮ್ಯಾಚಿನ ದಿನಾಂಕ ಫಿಕ್ಸ್ ಆಗಿದೆ. ಆಟಗಾರರೂ ಫಿಕ್ಸ್ ಆಗಿದ್ದಾರೆ. ಸಾರ್ವಜನಿಕರೂ ಫಿಕ್ಸ್ ಆಗಿದ್ದಾರೆ. ನಮ್ಮ ಕ್ಯಾಪ್ಟನ್ ನರೇಂದ್ರ ಮೋದಿಯವರು ಎಂದು ನಿಗದಿಯಾಗಿದೆ. ಅವರ ಕ್ಯಾಪ್ಟನ್ ಇನ್ನೂ ಫಿಕ್ಸ್ ಆಗಿಲ್ಲ” ಎಂದು ಆರ್ ಅಶೋಕ್ ಮಾರ್ಮಿಕವಾಗಿ ಹೇಳಿದರು.
“ಚುನಾವಣೆ ಬಂದಾಗ ಪ್ರಚಾರ ಬೇಕೇ ಬೇಕು. ಅದೇರೀತಿ ಸುಳ್ಳು ಸುದ್ದಿಗಳು ಬಂದಾಗ ಅದಕ್ಕೆ ಸ್ಪಷ್ಟನೆ ನೀಡುವುದು ಪಕ್ಷದ ಕರ್ತವ್ಯ. ಇವೆರಡನ್ನು ಒಂದೇ ಜಾಗದಲ್ಲಿ ಮಾಡಲಾಗುವುದು. ಬಿಜೆಪಿ ನಿರಂತರವಾಗಿ ಮಾಧ್ಯಮ ಸ್ನೇಹಿಯಾಗಿ ಕೆಲಸ ಮಾಡಿದೆ. ಪ್ರತಿ ಚುನಾವಣಾ ಸಂದರ್ಭದಲ್ಲೂ ಈ ತರಹ ಮಾಧ್ಯಮ ಕೇಂದ್ರವನ್ನು ತೆರೆಯಲಾಗುತ್ತಿದೆ. ಇದು ಮಾಧ್ಯಮದವರಿಗೆ ನೆರವಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.