Homeಕರ್ನಾಟಕಚಿನ್ನ ವಂಚನೆ | ಜಾರಿ ನಿರ್ದೇಶನಾಲಯ ವಶಕ್ಕೆ ಐಶ್ವರ್ಯ ಗೌಡ

ಚಿನ್ನ ವಂಚನೆ | ಜಾರಿ ನಿರ್ದೇಶನಾಲಯ ವಶಕ್ಕೆ ಐಶ್ವರ್ಯ ಗೌಡ

ಕಾಂಗ್ರೆಸ್‌ನ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರ ಹೆಸರು ಹೇಳಿಕೊಂಡು ಕೋಟ್ಯಂತರ ರೂ. ಮೌಲ್ಯದ ಚಿನ್ನ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಆರೋಪಿ ಐಶ್ವರ್ಯ ಗೌಡ ಅವರನ್ನು ವಶಕ್ಕೆ ಪಡೆದಿದ್ದಾರೆ.

ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯ ಗೌಡ ಅವರ ಬೆಂಗಳೂರು ಹಾಗೂ ಮಂಡ್ಯ ನಿವಾಸ ಮತ್ತು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದರು.

ಬೆಂಗಳೂರಿನಲ್ಲಿರುವ ಶಾಸಕ ವಿನಯ್ ಕುಲಕರ್ಣಿ ಅವರ ಮನೆ ಹಾಗೂ ಐಶ್ವರ್ಯ ಅವರ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಮನೆ ಮತ್ತು ಬೆಂಗಳೂರಿನ ನಿವಾಸದ ಮೇಲೆ ಇಡಿ ದಾಳಿ ನಡೆದಿದೆ.

ಇಬ್ಬರು ಸಿಆರ್​​ಪಿಎಫ್ ಸಿಬ್ಬಂದಿಯ ಭದ್ರತೆಯೊಂದಿಗೆ ದಾಳಿ ನಡೆಸಿದ ಇಡಿ ಅಧಿಕಾರಿಗಳು ಹಲವು ದಾಖಲೆಗಳ ಶೋಧ ಮಾಡಿದ್ದಾರೆ. ಐಶ್ವರ್ಯ ಗೌಡ ಅವರು ಸುಮಾರು 9 ಕೋಟಿ ರೂ. ಮೌಲ್ಯದ ಚಿನ್ನ ಖರೀದಿಸಿ ವಂಚಿಸಿದ ಆರೋಪ ಎದುರಿಸುತ್ತಿದ್ದು, ಹೆಚ್ಚಿನ ವಿಚಾರಣೆಗಾಗಿ ಐಶ್ವರ್ಯ ಗೌಡ ಅವರನ್ನು ಇಡಿ ವಶಕ್ಕೆ ಪಡೆದಿದೆ.

ವಾರಾಹಿ ವರ್ಲ್ಡ್‌ ಆಫ್‌ ಗೋಲ್ಡ್‌ ಜುವೆಲ್ಲರಿಯ ಮಾಲೀಕರಿಗೆ ಐಶ್ವರ್ಯ ಗೌಡ ವಂಚಿಸಿದ್ದಾರೆ ಎಂಬ ಆರೋಪವಿದೆ. ಇಷ್ಟೇ ಅಲ್ಲದೆ, ಮಾಜಿ ಸಂಸದ ಡಿ ಕೆ ಸುರೇಶ್ ಹೆಸರಿನಲ್ಲಿ ವಂಚನೆ ಎಸಗಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ 2024ರ ಡಿಸೆಂಬರ್​​ನಲ್ಲೇ ಡಿ ಕೆ ಸುರೇಶ್ ದೂರು ನೀಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments