ರಾಜ್ಯದ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿರುವ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಹೊಸ ದರ ಪರಿಷ್ಕರಣೆ ಮಾಡಿದ್ದು, ವಿದ್ಯುತ್ ದರ ಇಳಿಕೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.
ಈಗಾಗಲೇ ಗೃಹ ಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡಿರುವ ಸರ್ಕಾರ, ಲೋಕಸಭೆ ಚುನಾವಣೆಯ ಹೊತ್ತಲ್ಲಿ ಗ್ರಾಹಕರಿಗೆ ಬಂಪರ್ ಕೊಡುಗೆ ನೀಡಿದೆ.
100 ಯೂನಿಟ್ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯೂನಿಟ್ ಮೇಲೆ 1 ರೂಪಾಯಿ 10 ಪೈಸೆ ಇಳಿಕೆ ಮಾಡಲಾಗಿದೆ. ಅದೇ ರೀತಿಯಾಗಿ ವಾಣಿಜ್ಯ ಬಳಕೆದಾರರಿಗೆ 1 ರೂಪಾಯಿ 25 ಪೈಸೆ ದರ ಇಳಿಕೆ ಮಾಡಲಾಗಿದೆ.
ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಯೂನಿಟ್ಗೆ 40 ಪೈಸೆ ಕಡಿತ ಮಾಡಲಾಗಿದ್ದು, ಖಾಸಗಿ ಏತ ನೀರಾವರಿ ಬಳಕೆದಾರರಿಗೆ 2 ರೂಪಾಯಿ ಇಳಿಕೆ ಮಾಡಲಾಗಿದೆ.
100 ಯೂನಿಟ್ಗಿಂತ ಹೆಚ್ಚು ಬಳಸುವವರಿಗೆ ಮಾತ್ರ ಹೊಸ ದರ ಮಾರ್ಚ್ 1ರಿಂದಲೇ ಅನ್ವಯವಾಗಲಿದೆ.