Homeಕರ್ನಾಟಕಕನ್ನಡ ವೈದ್ಯಕೀಯ ಸಾಹಿತ್ಯ ಉಳಿವಿಗೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ಕನ್ನಡ ವೈದ್ಯಕೀಯ ಸಾಹಿತ್ಯ ಉಳಿವಿಗೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

“ಕನ್ನಡದಲ್ಲಿ ವೈದ್ಯಕೀಯ ಸಾಹಿತ್ಯ ಪರಂಪರೆ ಉಳಿಸುವ ಪ್ರಯತ್ನಕ್ಕೆ ಸರ್ಕಾರದ ಬೆಂಬಲವಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶಿವಕುಮಾರ್ ಅವರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯದ ವತಿಯಿಂದ 2ನೇ ಕನ್ನಡ ವೈದ್ಯಕೀಯ ಸಾಹಿತ್ಯ ಸಮ್ಮೇಳನ 2026ರ ಕಿರು ಹೊತ್ತಿಗೆ ಮತ್ತು ಲಾಂಛನವನ್ನು ಸೋಮವಾರ ಬಿಡುಗಡೆಗೊಳಿಸಿ ಮಾತನಾಡಿದರು.

“ಕನ್ನಡ ನಮ್ಮೆಲ್ಲರ ಬದುಕು. ಕನ್ನಡವನ್ನು ಉಳಿಸಲು ನಾಡಿನ ಜನ ಹೋರಾಡುತ್ತಿದ್ದಾರೆ. ಕನ್ನಡದಲ್ಲಿ ವೈದ್ಯಕೀಯ ಸಾಹಿತ್ಯಕ್ಕೆ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ. ನಮ್ಮ ನಾಡ ಭಾಷೆ, ಸಂಸ್ಕೃತಿ ಕಾಪಾಡಿ, ವೈದ್ಯರು, ದಾದಿಯರು ಕನ್ನಡವನ್ನು ಬಳಸುವ ಪ್ರಯತ್ನ ಮಾಡಬೇಕು. ಸರ್ಕಾರ ವೈದ್ಯಕೀಯ ಮತ್ತು ತಾಂತ್ರಿಕ ಶಿಕ್ಷಣದಲ್ಲಿ ಕನ್ನಡವನ್ನು ಬಳಸುವ ಪ್ರಯತ್ನಕ್ಕೆ ಎಲ್ಲಾ ಹಿರಿಯ ವೈದ್ಯರಿಗೆ ಶುಭ ಹಾರೈಸುತ್ತೇನೆ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments