ಮಾಜಿ ಮುಖ್ಯಮಂತ್ರಿ ದಿ. ಎಸ್.ನಿಜಲಿಂಗಪ್ಪ ಅವರು ಚಿತ್ರದುರ್ಗದಲ್ಲಿ ವಾಸವಿದ್ದ ಮನೆಯನ್ನು ಸರ್ಕಾರಿಂದ ಖರೀದಿಸಿ ಸಂರಕ್ಷಿಸಲು ಹಾಗೂ ಅಭಿವೃದ್ಧಿಗೊಳಿಸಲು ಅಗತ್ಯ ಕ್ರಮ ವಹಿಸುವಂತೆ ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಕಾರ್ಯದರ್ಶಿ ಚುತ್ರದುರ್ಗ ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.
2020-21ನೇ ಸಾಲಿನ ಆಯವ್ಯಯ ಎಸ್.ನಿಜಲಿಂಗಪ್ಪನವರು ಚಿತ್ರದುರ್ಗದಲ್ಲಿ ವಾಸವಿದ್ದ ಮನೆಯನ್ನು ಸರ್ಕಾರವು ಖರೀದಿಸಿ ಸಂರಕ್ಷಿಸಲು ಹಾಗೂ ಅಭಿವೃದ್ಧಿಗೊಳಿಸಲು 5 ಕೋಟಿ ರೂ. ಅನುದಾನ ಒದಗಿಸಲು ಘೋಷಿಸಲಾಗಿತ್ತು.
ಸರ್ಕಾರದ ಆದೇಶದಂತೆ ನಿಜಲಿಂಗಪ್ಪನವರು ವಾಸವಿದ್ದ ಮನೆಯನ್ನು ಸರ್ಕಾರವು ಖರೀದಿಸಿ ಸಂರಕ್ಷಿಸಲು ಹಾಗೂ ಅಭಿವೃದ್ಧಿಗೊಳಿಸಲು 5 ಕೋಟಿ ರೂ.ಗೆ ಆಡಳಿತಾತ್ಮಕ ಅನುಮೋದನೆ ನೀಡಿ, 2 ಕೋಟಿ ರೂ. ಅನುದಾನವನ್ನು ಜಿಲ್ಲಾಧಿಕಾರಿಗೆ ಕಚೇರಿಗೆ ಬಿಡುಗಡೆ ಮಾಡಿದೆ.
ನಿಜಲಿಂಗಪ್ಪ ಅವರ ಮನೆಯನ್ನು ಖರೀದಿಸಲು ಲೋಕೋಪಯೋಗಿ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಲಾಗಿದ್ದು, ಅಂದಾಜುಪಟ್ಟಿಯನುಸಾರ ಸದರಿ ಮನೆಯನ್ನು 4,18,49,017 ರೂ. ಮೊತ್ತದಲ್ಲಿ ವಿನಯ್ ಅವರಿಂದ ಖರೀದಿಸಲು ಕಾನೂನು ಅಭಿಪ್ರಾಯ ಹಾಗೂ ನಿರ್ದೇಶನ ಕೋರಲಾಗಿತ್ತು. ಕೋರ್ಟ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಖರೀದಿಸಿ ಸಂರಕ್ಷಿಸಲು ಹಾಗೂ ಅಭಿವೃದ್ಧಿಗೊಳಿಸಲು ಅಗತ್ಯ ಕ್ರಮ ವಹಿಸುವಂತೆ ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಕಾರ್ಯದರ್ಶಿ ಚುತ್ರದುರ್ಗ ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.