Homeಕರ್ನಾಟಕ2025-26ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಯ ಮಾರ್ಗಸೂಚಿ ಹೊರಡಿಸಿದ ಸರ್ಕಾರ

2025-26ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಯ ಮಾರ್ಗಸೂಚಿ ಹೊರಡಿಸಿದ ಸರ್ಕಾರ

ರಾಜ್ಯ ಸರ್ಕಾರ 2025-26ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಯ ಮಾರ್ಗಸೂಚಿ ಹೊರಡಿಸಿದೆ. ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ಮಾಡಲಾಗುವ ವರ್ಗಾವಣೆಗಳ ಸಂಖ್ಯೆ ಆಯಾ ವೃಂದಗಳ ಕಾರ್ಯನಿರತ ವೃಂದ ಬಲದ ಶೇ.6ನ್ನು ಮೀರದಂತೆ 15.05.2025 ರಿಂದ 14.06.2025 ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ತೀರ್ಮಾನಿಸಲಾಗಿದೆ.

ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ನೀಡಲಾಗಿದೆ. ಯಾವುದೇ ಸರ್ಕಾರಿ ನೌಕರರ ವರ್ಗಾವಣೆಯಾದ ಸಂದರ್ಭಗಳಲ್ಲಿ ಯಾವುದೇ ನೌಕರರು ಸ್ಥಳ ನಿಯುಕ್ತಿಗಾಗಿ ಕಾಯದಂತೆ ಕಡ್ಡಾಯವಾಗಿ ಸ್ಥಳ ನಿಯುಕ್ತಿ ಮಾಡಬೇಕು.

ಯಾವುದೇ ಸರ್ಕಾರಿ ನೌಕರನ ವಿರುದ್ಧ ಗಂಭೀರ ಸ್ವರೂಪದ ಆರೋಪಗಳಿದ್ದು, ಇಲಾಖಾ ವಿಚಾರಣೆ / ಕ್ರಿಮಿನಲ್ ನಡವಳಿ ಪ್ರಾರಂಭಿಸಿದ್ದಲ್ಲಿ ಅಥವಾ ಬಾಕಿಯಿದ್ದಲ್ಲಿ ಅಂತಹವರನ್ನು ತನಿಖೆ / ಇಲಾಖಾ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡಬಹುದಾದ ಹುದ್ದೆಗಳಿಗೆ ನೇಮಿಸದೇ ಆಡಳಿತಾತ್ಮಕ ಅನುಕೂಲಕ್ಕೆ Non-Executive ಹುದ್ದೆಗಳಿಗೆ ನೇಮಿಸಬೇಕು. ಜೊತೆಗೆ ಇಲಾಖಾ ವಿಚಾರಣೆ /ಕ್ರಿಮಿನಲ್‌ ಮೊಕದ್ದಮೆ ಬಾಕಿಯಿರುವ ಸರ್ಕಾರಿ ನೌಕರರನ್ನು ಅವರು ಕೋರುವ ಹುದ್ದೆಗೆ ಸ್ಥಳನಿಯುಕ್ತಿಗೊಳಿಸಬಾರದು ಎಂದು ತಿಳಿಸಲಾಗಿದೆ.

ಒಂದು ಸ್ಥಳದಲ್ಲಿರಬಹುದಾದ ಕನಿಷ್ಠ ಅವಧಿ: ಒಂದು ಸ್ಥಳದಲ್ಲಿ ಈ ಕೆಳಗೆ ಸೂಚಿಸಿರುವ ಸೇವಾವಧಿಯನ್ನು ಪೂರ್ಣಗೊಳಿಸದ ಯಾವುದೇ ಸರ್ಕಾರಿ ನೌಕರನನ್ನು ಸಾಧಾರಣವಾಗಿ ವರ್ಗಾವಣೆ ಮಾಡುವಂತಿಲ್ಲ. ಎಲ್ಲ ಗುಂಪು ಎ ಹುದ್ದೆಗಳು 2 ವರ್ಷ, ಎಲ್ಲ ಗುಂಪು-ಬಿ ಹುದ್ದೆಗಳು 2 ವರ್ಷ, ಎಲ್ಲ ಗುಂಪು-ಸಿ ಹುದ್ದೆಗಳು 4 ವರ್ಷ, ಎಲ್ಲ ಗುಂಪು-ಡಿ ಹುದ್ದೆಗಳು 7 ವರ್ಷ ಪೂರೈಸದ ನೌಕರರನ್ನು ವರ್ಗಾವಣೆ ಮಾಡುವಂತಿಲ್ಲ.

ತಮ್ಮ ಇಲಾಖೆಯ ವ್ಯಾಪ್ತಿಯಡಿ ಬರುವ ಇಲಾಖೆಗಳ ಒಂದು ನಿರ್ದಿಷ್ಟವಾದ ಹುದ್ದೆಯ ಕಾರ್ಯ ಸ್ವರೂಪದ / ಸೂಕ್ಷ್ಮತೆಯ ಆಧಾರದ ಮೇಲೆ ಒಂದು ಹುದ್ದೆಯಲ್ಲಿ ಸರ್ಕಾರಿ ನೌಕರನು ಸೇವೆ ಸಲ್ಲಿಸಬಹುದಾದ ಕನಿಷ್ಠ ಅವಧಿಯನ್ನು ಸಚಿವಾಲಯದ ಆಡಳಿತ ಇಲಾಖೆಗಳು ಮುಖ್ಯಮಂತ್ರಿಯವರ ಪೂರ್ವಾನುಮೋದನೆಯೊಂದಿಗೆ ಕಾಲಕಾಲಕ್ಕೆ ಪರಿಷ್ಕರಿಸಿ/ನಿಗದಿಪಡಿಸಿ ಆದೇಶ ಹೊರಡಿಸಬಹುದು.

ಇಲಾಖಾ ಮುಖ್ಯಸ್ಥರು ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತಹ ವರ್ಗಾವಣೆ ಪ್ರಸ್ತಾವನೆಗಳನ್ನು ಸಚಿವಾಲಯದ ಆಡಳಿತ ಇಲಾಖೆಗಳ ಮೂಲಕವೇ ಸಚಿವರಿಗೆ ಸಲ್ಲಿಸಬೇಕು. ಹೈದರಾಬಾದ್-ಕರ್ನಾಟಕ ಪ್ರದೇಶದಲ್ಲಿ ನೆಲೆಸಿರುವ ಕಚೇರಿಗಳಿಗೆ ಸ್ಥಳೀಯ ವೃಂದ ಮತ್ತು ಮಿಕ್ಕುಳಿದ ವೃಂದಗಳಲ್ಲಿನ ವಿವಿಧ ವೃಂದದ ಹುದ್ದೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ನೇಮಕಾತಿ ಹೊಂದಿರುವ ನೌಕರರನ್ನು ಅವರ ನೇಮಕಾತಿ ದಿನಾಂಕದಿಂದ ಕನಿಷ್ಠ 10 ವರ್ಷಗಳವರೆಗೂ ಹೈದರಾಬಾದ್-ಕರ್ನಾಟಕ ಪ್ರದೇಶ ಹೊರತುಪಡಿಸಿ ವರ್ಗಾವಣೆ ಮಾಡಬಾರದು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments