Homeಕರ್ನಾಟಕ5,8 ಹಾಗೂ 9ನೇ ತರಗತಿಗಳ ಪಬ್ಲಿಕ್ ಪರೀಕ್ಷೆ‌ ಮುಂದೂಡಿ ಸರ್ಕಾರ ಆದೇಶ

5,8 ಹಾಗೂ 9ನೇ ತರಗತಿಗಳ ಪಬ್ಲಿಕ್ ಪರೀಕ್ಷೆ‌ ಮುಂದೂಡಿ ಸರ್ಕಾರ ಆದೇಶ

ಮಾರ್ಚ್‌ 13ರಂದು ಬುಧವಾರ ನಡೆಯಬೇಕಿದ್ದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ 5, 8 ಹಾಗೂ 9ನೇ ತರಗತಿಗಳ ಪರೀಕ್ಷೆಗಳನ್ನು ಮುಂದೂಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹೈಕೋರ್ಟ್‌ ತಡೆಯಾಜ್ಞೆ ಮತ್ತು ತೆರವಿನ ಬಳಿಕ ಸೋಮವಾರದಿಂದ ಆರಂಭವಾಗಿದ್ದ 5, 8 ಹಾಗೂ 9ನೇ ತರಗತಿ ಬೋರ್ಡ್‌ ಪರೀಕ್ಷೆಗಳಿಗೆ ಸುಪ್ರೀಂಕೋರ್ಟ್‌ ಮತ್ತೆ ತಡೆಯಾಜ್ಞೆ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ.

ಕಡ್ಡಾಯ ಶಿಕ್ಷಣ ಕಾಯ್ದೆ ಮತ್ತು ಮಕ್ಕಳ ಹಕ್ಕುಗಳ ಉಲ್ಲಂಘನೆಯ ಆಧಾರದ ಮೇಲೆ ಖಾಸಗಿ ಶಾಲೆಗಳ ಒಕ್ಕೂಟ (ರುಪ್ಸಾ) 5, 8 ಮತ್ತು 9ನೇ ತರಗತಿ ಪಬ್ಲಿಕ್‌ ಪರೀಕ್ಷೆಯನ್ನು ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರಿತ್ತು. ಪ್ರಕರಣದ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟ್‌, ಕಳೆದ ಗುರುವಾರ, ಪರೀಕ್ಷೆಗೆ ನಾಲ್ಕು ದಿನ ಇರುವಾಗ ರದ್ದು ಆದೇಶ ನೀಡಿತ್ತು.

ರಾಜ್ಯ ಸರ್ಕಾರ ತೀರ್ಪು ಪುನರ್‌ ಪರಿಶೀಲನೆ ಕೋರಿ ರಿಟ್‌ ಸಲ್ಲಿಸಿತ್ತು. ಮಾರನೇ ದಿನವೇ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಪರೀಕ್ಷೆಗೆ ಎಲ್ಲಾ ತಯಾರಿ ಮಾಡಿಕೊಂಡಿರುವ ಅಂಶವನ್ನು ಪರಿಗಣಿಸಿ, ಪರೀಕ್ಷೆ ನಡೆಸಲು ಅನುಮತಿ ನೀಡಿತ್ತು. ಆದರೆ, ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ರುಪ್ಸಾ, ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು.

ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ವಿಚಾರಣೆ ಪೂರ್ಣಗೊಳ್ಳುವವರೆಗೆ ಪರೀಕ್ಷೆ ತಡೆ ಹಿಡಿಯುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಸುಪ್ರೀಂಕೋರ್ಟ್‌ ಆದೇಶದ ಬೆನ್ನಲ್ಲೇ, ರಾಜ್ಯ ಸರ್ಕಾರ ಪರೀಕ್ಷೆಗಳನ್ನು ಮುಂದೂಡಿ ಸುತ್ತೋಲೆ ಹೊರಡಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments