Homeಕರ್ನಾಟಕವಿವಿಧ ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ಅಧ್ಯಕ್ಷರು, ಸದಸ್ಯರ ನೇಮಿಸಿ ಸರ್ಕಾರ ಆದೇಶ

ವಿವಿಧ ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ಅಧ್ಯಕ್ಷರು, ಸದಸ್ಯರ ನೇಮಿಸಿ ಸರ್ಕಾರ ಆದೇಶ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುವ ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ರಾಜ್ಯ ಸರ್ಕಾರವು ನೂತನ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಚಿಂತಕ ಡಾ.ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಡಾ.ಎಲ್.ಎನ್.ಮುಕುಂದರಾಜ್ ಆಯ್ಕೆಯಾಗಿದ್ದಾರೆ.

ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿ ಡಾ. ಚನ್ನಪ್ಪ ಕಟ್ಟಿ, ಕನ್ನಡ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಮಾನಸ ನೇಮಕಗೊಂಡಿದ್ದಾರೆ.

ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರಾಗಿ ಡಾ. ಕೆ.ವಿ.ನಾಗರಾಜ ಮೂರ್ತಿ, ಕರ್ನಾಟಕ ಸಂಗೀತ, ನೃತ್ಯ ಅಕಾಡೆಮಿ ಅಧ್ಯಕ್ಷರಾಗಿ ಡಾ.ಕೃಪಾ ಫಡಕಿ, ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷರಾಗಿ ಎಂ.ಸಿ.ರಮೇಶ್, ಕರ್ನಾಟಕ ಲಲಿತ ಕಲಾ ಅಕಾಡೆಮಿ ಅಧ್ಯಕ್ಷರಾಗಿ ಡಾ. ಪ.ಸ.ಕುಮಾರ್, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾಗಿ ಶಿವಪ್ರಸಾದ್ ಗೊಲ್ಲಹಳ್ಳಿ ನೇಮಕವಾಗಿದ್ದಾರೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ತಾರಾನಾತ್ ಗಟ್ಟಿ ಕಾಪಿಕಾಡ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಜೊಕಿಂ ಸ್ಟ್ಯಾನ್ಲಿ ಅಲ್ವಾರಿಸ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಉಮರ್ ಯು.ಎಚ್. ನೇಮಕಗೊಂಡಿದ್ದಾರೆ.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಸದಾನಂದ ಮಾವಜಿ, ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷರಾಗಿ ಪ್ರೊ.ದುರ್ಗಾದಾಸ್, ಕರ್ನಾಟಕ ಬಂಜಾರ ಅಕಾಡೆಮಿ ಅಧ್ಯಕ್ಷರಾಗಿ ಡಾ.ಎ.ಆರ್. ಗೋವಿಂದಸ್ವಾಮಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಅಜ್ಜಿನಕೊಂಡ ಮಹೇಶ ನಾಚಯ್ಯ ನೇಮಕವಾಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments