ಸರ್ಕಾರಿ ನೇಮಕಾತಿ ವಿಚಾರವಾಗಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪನ್ನು ಪ್ರಕಟಿಸಿದೆ. ಸರ್ಕಾರಿ ನೇಮಕಾತಿಗಳ ಅಧಿಸೂಚನೆಯಲ್ಲಿ ನಿರ್ದಿಷ್ಟ ಸೂಚನೆಗಳನ್ನು ನೀಡದೆ, ಇಡೀ ಪ್ರಕ್ರಿಯೆಯನ್ನು ಮಧ್ಯದಲ್ಲಿ ತಡೆಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು ಗುರುವಾರ ಅರ್ಜಿಯ ವಿಚಾರಣೆ ನಡೆಸಿ, “ಒಂದು ಬಾರಿ ನೇಮಕಾತಿ ಪ್ರಕ್ರಿಯೆ ಆರಂಭವಾದರೆ, ಅದನ್ನು ಅರ್ಧದಲ್ಲಿಯೇ ನಿಲ್ಲಿಸುವಂತಿಲ್ಲ” ಎಂದು ತಿಳಿಸಿದೆ.
“ನೇಮಕಾತಿಯ ನಿಯಮಗಳು ಅನಿಯಂತ್ರಿತವಾಗಿರಬಾರದು ಹಾಗೂ ಸಂವಿಧಾನದ 14ನೇ ವಿಧಿಗೆ ಅನುಗುಣವಾಗಿರಬೇಕು. ಸರ್ಕಾರಿ ನೇಮಕಾತಿಗಳು ಎಂದೆಂದಿಗೂ ತಾರತಮ್ಯ ರಹಿತ ಹಾಗೂ ಪಾರದರ್ಶಕತೆಯಿಂದ ಕೂಡಿರಬೇಕು” ಎಂದು ಪೀಠ ಹೇಳಿದೆ.
ಪೀಠದಲ್ಲಿದ್ದ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್, ಪಿ.ಎಸ್. ನರಸಿಂಹ, ಪಂಕಜ್ ಮಿತ್ತಲ್ ಹಾಗೂ ಮನೋಜ್ ಮಿಶ್ರಾ ಇದ್ದರು.