Homeಕರ್ನಾಟಕ‘ಬೆಂಗಳೂರು ಹಬ್ಬ’ಕ್ಕೆ ಸರ್ಕಾರದಿಂದ ಸಹಕಾರ: ಸಿಎಂ ಸಿದ್ದರಾಮಯ್ಯ ಭರವಸೆ

‘ಬೆಂಗಳೂರು ಹಬ್ಬ’ಕ್ಕೆ ಸರ್ಕಾರದಿಂದ ಸಹಕಾರ: ಸಿಎಂ ಸಿದ್ದರಾಮಯ್ಯ ಭರವಸೆ

‘ಬೆಂಗಳೂರು ಹಬ್ಬ’ದಂತಹ ಹಬ್ಬಗಳ ಮೂಲಕ ಬೆಂಗಳೂರಿನ ಇತಿಹಾಸ, ಕಲೆ, ಸಂಸ್ಕೃತಿ , ಪರಂಪರೆಗಳನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗೃಹಕಚೇರಿ ಕೃಷ್ಣಾದಲ್ಲಿ ಗುರುವಾರ ಪ್ರಶಾಂತ್ ಪ್ರಕಾಶ್ ಹಾಗೂ ಮಾಲಿನಿ ಗೋಯಲ್ ಅವರು ಬರೆದಿರುವ Unboxing Bengaluru, The City of New Beginnings ಪುಸ್ತಕ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

“Unboxing Bengaluru, The City of New Beginnings ಪುಸ್ತಕ ಇಂಗ್ಲೀಷ್ ಜೊತೆಗೆ ಕನ್ನಡದಲ್ಲಿಯೂ ಬಂದಿದ್ದರೆ ಇನ್ನೂ ಉತ್ತಮವಾಗಿರುತ್ತಿತ್ತು. ಪ್ರಶಾಂತ್ ಪ್ರಕಾಶ್ ಹಾಗೂ ಮಾಲಿನಿ ಗೋಯಲ್ ಅವರು ಬೆಂಗಳೂರು ಹಬ್ಬ ಆಯೋಜಿಸುತ್ತಿರುವುದು ಸಂತೋಷದ ವಿಚಾರ. ಬೆಂಗಳೂರು ಹಬ್ಬಕ್ಕೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ” ಎಂದು ಭರವಸೆ ನೀಡಿದರು.

“ಬೆಂಗಳೂರು ವೇಗವಾಗಿ ಬೆಳೆಯುತ್ತಿರುವ ನಗರ. ಐತಿಹಾಸಿಕ ಮಹತ್ವವಿರುವ ಬೆಂಗಳೂರು ನಗರವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಯೋಜನಾಬದ್ಧವಾಗಿ ಬೆಳೆಸಬೇಕಾಗಿತ್ತು. ನಗರದಲ್ಲಿ ಸುಮಾರು ಒಂದೂವರೆ ಕೋಟಿ ಜನರಿದ್ದಾರೆ. ಬೆಂಗಳೂರು ನಗರದಲ್ಲಿ, ಇಲ್ಲಿನ ಸಂಸ್ಕೃತಿ, ಕಲೆ, ಜನಜೀವನ, ನಾಗರೀಕತೆಗಳನ್ನು ಉಳಿಸಿಕೊಂಡು ಬರಲಾಗಿದೆ” ಎಂದರು.

“ದೇಶ ವಿದೇಶಗಳಿಂದ ಉದ್ಯೋಗವರಿಸಿ ಜನ ನಗರದಲ್ಲಿ ನೆಲೆಸಿದ್ದರೂ ಕೂಡ ಎಲ್ಲರೂ ಕನ್ನಡಿಗರಾಗಿ ಬಾಳಬೇಕು. ನಾವೆಲ್ಲಾ ಕನ್ನಡಿಗರಾಗಿ , ಪರಸ್ಪರ ಪ್ರೀತಿ ವಿಶ್ವಾಸಗಳೊಂದಿಗೆ ಸೌಹಾರ್ದತೆಯಿಂದ ಬಾಳಬೇಕು” ಎಂದು ಕರೆ ನೀಡಿದರು.

“ಬೆಂಗಳೂರು ನಗರದಲ್ಲಿ ಬಹಳ ಹಿಂದಿನಿಂದಲೂ ಕಡ್ಲೆಕಾಯಿ ಪರಿಷೆಯಂತಹ ಸಾಂಪ್ರಾದಾಯಿಕ ಆಚರಣೆಗಳನ್ನು ಮಾಡಿಕೊಂಡು ಬರಲಾಗುತ್ತಿದೆ. ಈ ಜಾತ್ರೆಯಲ್ಲಿ ಬೆಂಗಳೂರಿಗರು ಬಹಳ ಸಂಭ್ರಮದಿಂದ ಭಾಗವಹಿಸುತ್ತಾರೆ. ಅಂತೆಯೇ ತಾವು ಆಯೋಜಿಸುವ ಬೆಂಗಳೂರು ಹಬ್ಬದಲ್ಲಿ, ನಗರದ ಜನರೆಲ್ಲ ಸಂಭ್ರಮದಿಂದ ಭಾಗವಹಿಸುವಹಿಸಬೇಕು” ಎಂದು ಕೋರಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments