Homeಕರ್ನಾಟಕಗಿಗ್ ಕಾರ್ಮಿಕರ ಸುಗ್ರೀವಾಜ್ಞೆನೆಗೆ ರಾಜ್ಯಪಾಲರ ಅಂಕಿತ, ಸಚಿವ ಸಂತೋಷ್‌ ಲಾಡ್‌ ಅಭಿನಂದನೆ

ಗಿಗ್ ಕಾರ್ಮಿಕರ ಸುಗ್ರೀವಾಜ್ಞೆನೆಗೆ ರಾಜ್ಯಪಾಲರ ಅಂಕಿತ, ಸಚಿವ ಸಂತೋಷ್‌ ಲಾಡ್‌ ಅಭಿನಂದನೆ

ಬಹು ನಿರೀಕ್ಷಿತ ‘ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ) ಸುಗ್ರೀವಾಜ್ಞೆ ́ಗೆ ರಾಜ್ಯಪಾಲರ ಅಂಕಿತ ದೊರೆತ ಹಿನ್ನೆಲೆಯಲ್ಲಿ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು, ಗಿಗ್ ಕಾರ್ಮಿಕರೊಂದಿಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಅಭಿನಂದನೆಗಳನ್ನು ಸಲ್ಲಿಸಿದರು.

‘ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ) ವಿಧೇಯಕಗಳ ಸುಗ್ರೀವಾಜ್ಞೆ ́ಗೆ ರಾಜ್ಯಪಾಲರು ಇತ್ತೀಚೆಗೆ ಸಹಿ ಹಾಕಿದ್ದರು. ರಾಜ್ಯದಲ್ಲಿ ಪ್ಲಾಟ್‌ಫಾರಂ ಆಧಾರಿತ ಗಿಗ್‌ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಸಂಬಂಧ ಪ್ರತ್ಯೇಕ ಮಂಡಳಿ ಸ್ಥಾಪನೆಗೆ ಸರ್ಕಾರದ ಹಾದಿ ಇದರಿಂದ ಸುಗಮವಾಗಿದೆ.

ಗಿಗ್‌ ಕಾರ್ಮಿಕರಿಗೆ ಅಪಘಾತ ವಿಮೆ-ಪರಿಹಾರ, ಶೈಕ್ಷಣಿಕ ಸಹಾಯಧನ, ವಸತಿ ಸೌಲಭ್ಯ ಸೇರಿದಂತೆ ಹಲವಾರು ಸಾಮಾಜಿಕ ಸೇವಾ ಸೌಲಭ್ಯಗಳನ್ನು ಈ ಮಂಡಳಿಯ ಮೂಲಕ ಒದಗಿಸಲು ಸರ್ಕಾರ ಚಿಂತನೆ ನಡೆಸಿದೆ.
ಅಗ್ರಿಗೇಟರ್‌ ಸಂಸ್ಥೆಗಳು ವಹಿವಾಟಿನಿಂದ ಪಡೆದ ಆದಾಯದಿಂದ ಮಂಡಳಿಯಲ್ಲಿ ನಿಧಿ ಸ್ಥಾಪಿಸಿ ಅದನ್ನು ಗಿಗ್‌ ಕಾರ್ಮಿಕರ ಕಲ್ಯಾಣಕ್ಕೆ ಬಳಸುವುದು ಸುಗ್ರೀವಾಜ್ಞೆಯ ಮುಖ್ಯ ಉದ್ದೇಶವಾಗಿದೆ.

ರಾಜ್ಯಪಾಲರ ಭೇಟಿ ವೇಳೆ ಕಾರ್ಮಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಡಾ. ಎನ್‌ ವಿ ಪ್ರಸಾದ್‌, ಕಾರ್ಮಿಕ ಆಯುಕ್ತರಾದ ಡಾ. ಎಚ್‌ ಎನ್‌ ಗೋಪಾಲ ಕೃಷ್ಣ, ಸೇರಿದಂತೆ ಕಾರ್ಮಿಕ ಇಲಾಖೆಯ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments