Homeಕರ್ನಾಟಕರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್​ ಅವರಿಗೆ ಕೊರೋನಾ ಪಾಸಿಟಿವ್

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್​ ಅವರಿಗೆ ಕೊರೋನಾ ಪಾಸಿಟಿವ್

ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್​ ಅವರಿಗೆ ಕೊರೋನಾ ಸೋಂಕು ತಗುಲಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭು ಶಂಕರ್ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಪರೀಕ್ಷೆಯಲ್ಲಿ ಥಾವರ್‌ಚಂದ್ ಗೆಹ್ಲೋಟ್​ ಅವರಿಗೆ ಕೋವಿಡ್‌ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಗೆಹ್ಲೋಟ್‌ ಅವರು ರಾಜಭವನದಲ್ಲಿ ಕ್ವಾರಂಟೈನ್‌ ಆಗಿದ್ದಾರೆ.

ಮುಂದಿನ ದಿನಾಂಕದವರೆಗೆ ರಾಜ್ಯಪಾಲರ ನಿಗದಿತ ಕಾರ್ಯಕ್ರಮ ರದ್ದು ಮಾಡಲಾಗಿದೆ ಪ್ರಕಟಣೆಯಲ್ಲಿ ಆರ್. ಪ್ರಭು ಶಂಕರ್ ಉಲ್ಲೇಖಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ, “ಕೊರೊನಾ ಸೋಂಕಿಗೆ ಒಳಗಾಗಿರುವ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ” ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments